ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕನ್ನಡಪ್ರಭದ ಅನ್ನದಾತನ ಆತ್ಮಕತೆ ಪ್ರಸ್ತಾಪ

Rashmi Kasaragodu
Updated On : 6 Jul 2014, 1:08 am

ಚಾಮರಾಜನಗರ:  ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗು ವಾರ್ತಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಯಲ್ಲಿ ಮಾಧ್ಯಮಗಳ ಪಾತ್ರ ಕುರಿತು ವಿಚಾರ ಸಂಕಿರಣದಲ್ಲಿ 'ಕನ್ನಡಪ್ರಭ'ದಲ್ಲಿ ಪ್ರಕಟವಾದ ಅನ್ನದಾತನ ಆತ್ಮಕತೆ ಕುರಿತು ವಿಚಾರ ಪ್ರಸ್ತಾಪವಾಯಿತು. ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಮಾಧ್ಯಮಗಳು ಪ್ರಗತಿ ಪರ ಲೇಖನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಕಟಿಸಬೇಕು. ಈ ನಿಟ್ಟಿನಲ್ಲಿ ಕನ್ನಡಪ್ರಭ ಮೈಸೂರಿನ ವಿಶೇಷ ವರದಿಗಾರ ಅಂಶಿ ಪ್ರಸನ್ನ ಕುಮಾರ್ ಅವರು ಅನ್ನದಾತರ ಆತ್ಮಕತೆಯ ಸರಣಿ ರೂಪದಲ್ಲಿ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಇಂತಹ ಲೇಖನಗಳಿಂದ ಇತರರಿಗೂ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement