ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಜಯಪುರ ಹೋಬಳಿ ಗ್ರಾಮಗಳಿಗೆ ಕುಡಿಯುವ ನೀರು- ಎಚ್ಕೆಪಿ

Rashmi Kasaragodu
Updated On : 6 Jul 2014, 1:00 am

ಮೈಸೂರು: ತಾಲೂಕಿನ ಜಯಪುರ ಹೋಬಳಿಯ 19 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ರು 1.13 ಲಕ್ಷ ಖರ್ಚು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ವಿಧಾನ ಪರಿಷತ್ತಿಗೆ ಹೇಳಿದರು. ಜೆಡಿಎಸ್ನ ಸಂದೇಶ್ ನಾಗರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದರಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿತ್ತು. ಇದಕ್ಕಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಿದ್ದು ಅದಕ್ಕೆ ರು 1.13 ಲಕ್ಷ ವೆಚ್ಚ ತಗುಲಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಗೆ 34 ಗ್ರಾಮಗಳು ಮತ್ತು ನಂಜನಗೂಡು ತಾಲೂಕಿನ 7 ಗ್ರಾಮಗಳು ಒಳಗೊಳ್ಳುತ್ತವೆ. ಈ ಯೋಜನೆಗೆ ರು 4514 ಲಕ್ಷ ಮಂಜೂರು ಮಾಡಲಾಗಿದೆ. ಈವರೆಗೆ ರು 595 ಲಕ್ಷ ವೆಚ್ಚವಾಗಿದ್ದು, ತಳೂರಿನಲ್ಲಿ ಮೇಲ್ಮಟ್ಟದ ಜಲಸಂಗ್ರಹಗಾರ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement