ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪುರಸಭೆ ಹೋರಾಟ ಸಮಿತಿ ಸಭೆ ಇಂದು

Rashmi Kasaragodu
Updated On : 6 Jul 2014, 1:01 am

ಟಿ. ನರಸೀಪುರ: ಪಟ್ಟಣದ ಶ್ರೀ ಮಹದೇವಪ್ಪ ಸ್ಮಾರಕ ಭವನದಲ್ಲಿ ಜು.6ರ ಬೆಳಗ್ಗೆ 10.30ಕ್ಕೆ ಪುರಸಭೆ ಹೋರಾಟ ಸಮಿತಿಯ ಸಭೆ ನಡೆಯಲಿದೆ. ಭೈರಾಪುರ ಹಾಗೂ ಆಲಗೂಡು ಗ್ರಾಪಂಗಳೆರಡನ್ನೂ ವಿಲೀನಗೊಳಿಸಿ ಪಪಂಯನ್ನು ಪುರಸಭೆಯಾಗಿ ಪರಿವರ್ತಿಸುವ ಪ್ರಸ್ತಾಪವನ್ನು ಸರ್ಕಾರ ಕೈಬಿಟ್ಟಿರುವ ಹಿನ್ನಲೆಯಲ್ಲಿ ಹೋರಾಟ ರೂಪಿಸಿ, ಪುರಸಭೆಯಾಗಿ ಮೇಲ್ದರ್ಜೆಗೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ನಾಗರಿಕ ಸೇವಾ ವೇದಿಕೆ ನೇತೃತ್ವದಲ್ಲಿ ಈ ಸಭೆ ಕರೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಎನ್. ಪ್ರಭುಸ್ವಾಮಿ ತಿಳಿಸಿದ್ದಾರೆ.
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಟಿ. ನರಸೀಪುರ: ಶ್ರೀ ಅಯ್ಯಪ್ಪಸ್ವಾಮಿ ಸೇವಾ ಭಾರತಿ ಟ್ರಸ್ಟ್ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮೂಲ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜು.10 ರೊಳಗೆ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಫ್ಯಾನ್ಸಿ ಸ್ಟೋರ್ನಲ್ಲಿ ಸಲ್ಲಿಸಬೇಕು. ಮೊ. 99025 93698 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement