ರಾಜ್ಯ ಮಟ್ಟದ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ
ಮೈಸೂರು: ಈಶ್ವರ್ ಎಂಟರ್ಪ್ರೈಸಸ್ ವತಿಯಿಂದ ಜು.25 ರಿಂದ 27 ರವರೆಗೆ ನಗರದ ಜೆ.ಕೆ. ಮೈದಾನದಲ್ಲಿ ರಾಜ್ಯ ಮಟ್ಟದ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ವಿಜೇತ ತಂಡಕ್ಕೆ ಪ್ರಥಮ ಬಹುಮಾನ 25 ಸಾವಿರ ರು., ದ್ವಿತೀಯ ಬಹುಮಾನ 15 ಸಾವಿರ ರು. ಜತೆಗೆ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಜತೆಗ ಸರಣಿ ಸ್ರೇಷ್ಠ ಮತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿ ಕೊಡಲಾಗುವುದು. ಆಸಕ್ತ ತಂಡಗಳು 2500 ಪ್ರವೇಶ ಶುಲ್ಕದೊಂದಿಗೆ ಜು. 22 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮೂ. 99458 193535, 98444 79491 ಸಂಪರ್ಕಿಸಬಹುದು.
ಪ್ರತಿಭಾರ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಟಿ. ನರಸೀಪುರ: ಶ್ರೀ ಅಯ್ಯಪ್ಪಸ್ವಾಮಿ ಸೇವಾ ಭಾರತಿ ಟ್ರಸ್ಟ್ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮೂಲ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜು.10 ರೊಳಗೆ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಫ್ಯಾನ್ಸಿ ಸ್ಟೋರ್ನಲ್ಲಿ ಸಲ್ಲಿಸಬೇಕು. ಮೊ. 99025 93698 ಸಂಪರ್ಕಿಸಬಹುದು.