ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2014-15ನೇ ಸಾಲಿನಲ್ಲಿ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿವಿಯಿಂದ ಯಾವುದಾದರೊಂದು ಪದವಿ ಪಡೆದಿರಬೇಕು, ಪ್ರವರ್ಗ-1ಕ್ಕೆ ಸೇರಿದವರ ಕುಟುಂಬದ ವಾರ್ಷಿಕ ಆದಾಯ ಮಿತಿ ರು 4.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ ಹಾಗೂ 3ಬಿ ಗಳಿಗೆ ಸೇರಿದವರ ಕುಟುಂಬದ ವಾರ್ಷಿಕ ಆದಾಯ ಮಿತಿ ರು 3.50 ಲಕ್ಷದೊಳಗಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು. 23 ಕೊನೆ ದಿನ. ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ಸೈಟ್ ಢಿಢಿಢಿ.ಛಿಛ್ಛ್ಞಛ್ಠಜ್ಛಟಛಡಡಜಡ.್ಞಛ್ಠ.ಟ್ಝ್ಛಿ.್ಝಟಿನ್ನು ನೋಡಬಹುದು. ಆಯುಕ್ತರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಂ.16-ಡಿ, 3ನೇ ಮಹಡಿ, ಡಿ. ದೇವರಾಜ ಅರಸು ಭವನ, ಮಿಲ್ಲರ್ಸ್ ಕೆರೆ ಅಂಗಳ, ವಸಂತನಗರ, ಬೆಂಗಳೂರೂ-52. ಮೊ. 9480818013 ಸಂಪರ್ಕಿಸಬಹುದು.