ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ
ಮೈಸೂರು: ಶ್ರೀಕೃಷ್ಣ ಮಿತ್ರ ಮಂಡಳಿಯು ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.95 ಹೆಚ್ಚು ಅಂಕ ಗಳಿಸಿದ ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಸ್ವವಿವರ ಬರೆದು ಭಾವಚಿತ್ರ, ಅಂಕಪಟ್ಟಿ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಜು.9 ರೊಳಗೆ ಶ್ರೀಕೃಷ್ಣಧಾಮ ಕಚೇರಿ, ಸಾಹುಕಾರ್ ಚೆನ್ನಯ್ಯ ರಸ್ತೆ, ಮೈಸೂರು. ಇಲ್ಲಿಗೆ ಸಲ್ಲಿಸಬಹುದು. ದೂ.0821- 2544004 ಸಂಪರ್ಕಿಸಬಹುದು.
ಫಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಜು.8ರ ಬೆಳಗ್ಗೆ 9 ರಿಂದ 11 ರವರೆಗೆ ಶ್ರೀಕೃಷ್ಣಧಾಮದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನೆರವೇರಿಸಲಿದ್ದು, ವಿಪ್ರ ಬಾಂಧವರು ಭಾಗವಹಿಸುವಂತೆ ಶ್ರೀಕೃಷ್ಣಧಾಮ ಟ್ರಸ್ಟ್ನ ಉಪಾಧ್ಯಕ್ಷರು ತಿಳಿಸಿದ್ದಾರೆ.