ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

6 ತಾಸು ತ್ರೀಫೇಸ್ ಕೊಡಿ

Rashmi Kasaragodu
Updated On : 8 Jul 2014, 1:58 am

ಪಿರಿಯಾಪಟ್ಟಣ: ಗ್ರಾಮಾಂತರ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ಕಡಿತ ವಿರೋಧಿಸಿ ರಾಜ್ಯ ರೈತ ಸಂಘದ ಸದಸ್ಯರು ಪಟ್ಟಣದ ತಾಲೂಕು ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಎಸ್.ಪಿ. ಮೋಹನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ್ರಾಜೇ ಅರಸ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೇವಲ 6 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ನೀಡುತ್ತಿದ್ದು, ಅದನ್ನೂ ಸಮರ್ಪಕವಾಗಿ ನೀಡುತ್ತಿಲ್ಲ. ಇದರಿಂದಾಗಿ ಜಮೀನುಗಳಲ್ಲಿ ಬೆಳೆಗಳು ಒಣಗುತ್ತಿವೆ. ಗ್ರಾಮೀಣ ಭಾಗದ ಜನರು ಕಗ್ಗತ್ತಲಲ್ಲಿ ಜೀವನ ನಡೆಸುವಂತಾಗಿದೆ. ಸರ್ಕಾರ ನೀಡಿದ ಆಶ್ವಾಸನೆ ನೀಡಿರುವಂತೆ ನಿರಂತರ 6 ಗಂಟೆಗಳ ಕಾಲ ಕೃಷಿ ಪಂಪ್ಸೆಟ್ಗಳಿಗೆ ಕಡಿತವಿಲ್ಲದೆ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿದರು. ಮೂರು ಪಂಪ್ಸೆಟ್ಗಳಿಗೆ ಒಂದು ವಿದ್ಯುತ್ ಟ್ರಾನ್ಸ್ಫಾರ್ಮರ್ ಅಳವಡಿಸಬೇಕು. ಟ್ರಾನ್ಸ್ಫಾರ್ಮರ್ ಕೆಟ್ಟುಹೋದರೆ 72 ಗಂಟೆಗಳೊಳಗೆ ದುರಸ್ತಿಪಡಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು. ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಪ್ರತಿ ಗ್ರಾಪಂಗಳಲ್ಲಿ ಗೋಶಾಲೆ ತೆರೆಯಬೇಕು ಎನ್ನುವ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement