ಕಾನೂನು ಪ್ರಾಧಿಕಾರದಿಂದ ಸಸಿ ನೆಡುವ ಸಪ್ತಾಹ
ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಹಮ್ಮಿಕೊಂಡಿರುವ ಸಸಿ ನೆಡುವ ಸಪ್ತಾಹ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಕೆ.ಎಸ್. ಮುದಗಲ್ ಚಾಲನೆ ನೀಡಿದರು.
ನಗರದ ನ್ಯಾಯಾಲಯಗಳ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು. ನ್ಯಾಯಾಲಯದ ಆವರಣ ಹಾಗೂ ಸರ್ಕಾರಿ ಕಚೇರಿಗಳು ಮತ್ತು ಇತರೆ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೆರಾಲ್ಡ್ ಆರ್. ಮೆಂಡೋನ್ಜಾ, ನಿಯೋಜಿತ ಸದಸ್ಯ ಕಾರ್ಯದರ್ಶಿ ದಿನೇಶ್ ಹೆಗ್ಡೆ, ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ಎಸ್. ಮೂರ್ತಿ ಇದ್ದರು.