ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕ್ಯಾನ್ಸರ್ ತಪಾಸಣೆ ಶಿಬಿರ

Rashmi Kasaragodu
Updated On : 9 Jul 2014, 1:56 am

ಮೈಸೂರು:  ವಾಣಿವಿಲಾಸ ರಸ್ತೆಯಲ್ಲಿರುವ ಪ್ರೀತಿ ಕ್ಯಾನ್ಸರ್ ಸೆಂಟರ್ನಲ್ಲಿ ಜು.10 ರಂದು ಕ್ಯಾನ್ಸರ್ ಉಚಿತ ತಪಾಸಣೆ ಶಿಬಿರ ಏರ್ಪಡಿಸಿದ್ದು, ಒಂದು ತಿಂಗಳಿಗೂ ಮೇಲ್ಪಟ್ಟು ವಾಸಿಯಾಗದ ಗಾಯ, ರಕ್ತಸ್ರಾವ, ಊತ, ಗಡಸುತನ, ನುಂಗುವಾಗಿನ ತೊಂದರೆ, ಗಂಟಲಲ್ಲಿ ಉರಿತ ಅಥವಾ ತಡೆತ, ಧ್ವನಿ ಬದಲಾವಣೆ ಇರುವ ರೋಗಿಗಳು ಈ ಶಿಬಿರದಲ್ಲಿ ಭಾಗವಹಿಸಬಹುದು. ದೂ.0821- 4259259 ಸಂಪರ್ಕಿಸಬಹುದು.
ವ್ಯಕ್ತಿ ನಾಪತ್ತೆ
ಮೈಸೂರು: ಮೈಸೂರು ತಾಲೂಕು ಬಂಡಿಪಾಳ್ಯ ನಿವಾಸಿ ಸವಿತಾ ಎಂಬವರ ಪತಿ ಮಹೇಶ (30) ಜೂ.19 ರಂದು ಗಾರೆ ಕೆಲಸಕ್ಕೆ ಹೋದವರು ನಾಪತ್ತೆಯಾಗಿದ್ದಾರೆ. ಚಹರೆ- 5.7 ಅಡಿ ಎತ್ತರ, ದೃಢಕಾಯ ಶರೀರ, ಎಣ್ಣೆಗೆಂಪು ಮೈಬಣ್ಣ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ.0821- 2444955 ಸಂಪರ್ಕಿಸಲು ಮೈಸೂರು ದಕ್ಷಿಣ ಪೊಲೀಸ್ ಠಾಣೆಯ ಎಸ್ಐ ಮಂಜುನಾಥ್ ಕೋರಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement