ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನೀರಿನ ಸಮಸ್ಯೆ ಬರದಂತೆ ಕ್ರಮ ಕೈಗೊಳ್ಳಿ- ರಾಮಯ್ಯ ಸೂಚನೆ

Srinivasa Murthy VN
Updated On : 10 Jul 2014, 1:14 am

ಮೈಸೂರು: ವರುಣ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ನಂಜನಗೂಡು ಪ್ರವಾಸಿ ಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ಸಮಸ್ಯೆ ತಲೆದೋರದಂತೆ ಕೆಟ್ಟು ಹೋಗಿರುವ ಟಿಸಿಗಳನ್ನು ಕೂಡಲೇ ಬದಲಾಯಿಸಬೇಕು. ಅರಣ್ಯ ಇಲಾಖೆಯವರು ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡಲು ಕ್ರಮಕೈಗೊಳ್ಳಬೇಕು. ಕ್ಷೇತ್ರದ ಅಂಗನವಾಡಿ ಕೇಂದ್ರಗಳಿಗೆ ತಾಲೂಕು ಅಧಿಕಾರಿಗಳು ಭೇಟಿ ನೀಡಿ ಅಗಾಗ್ಗೆ ಪರಿಶೀಲಿಸುವಂತೆ ತಿಳಿಸಿದರು.
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು. ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ದತ್ತು ತೆಗೆದುಕೊಂಡು ಆಗಾಗ್ಗೆ ಪರಿಶೀಲಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು. ವೃದ್ಧಾಪ್ಯ ವೇತನ, ವಿಧವಾ ವೇತನದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಂತೆ ಕಟ್ಟಾಜ್ಞ ಹೊರಡಿಸಿದರು.
ತಾಪಂ ಇಒ ಕೃಷ್ಣಂರಾಜು, ಮಲ್ಲೇಶ್, ಎಲ್ಲಾ ಇಲಾಖೆಯ ಅಧಿಕಾರಿಗಳು ಇದ್ದರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.

ಪ್ರಾಣಿಗಳ ದತ್ತು ಸ್ವೀಕಾರ
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿ ವಿಜಯನಗರ ನಿವಾಸಿ ಟಿ.ಡಿ. ಯೋಗಾಂಬ ಎಂಬವರು ಆನೆ ಮರಿ, ಕಾಡು ಬೆಕ್ಕು, ಚಿರತೆ ಬೆಕ್ಕು, ಗೂಬೆ, ನವಿಲು, ಜಿಂಕೆ, ನಾಗರಹಾವು, ಆಮೆ ಮತ್ತು ಲವ್‌ಬರ್ಡ್‌ಗಳನ್ನು ದತ್ತು ಸ್ವೀಕರಿಸಿದ್ದಾರೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ರವಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement