ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಜನಸಂಖ್ಯೆ ಹೆಚ್ಚಳ ಅಭಿವೃದ್ಧಿಗೆ ಮಾರಕ: ಸಾದಿಕ್ಖಾನ್

Rashmi Kasaragodu
Updated On : 13 Jul 2014, 1:07 am

ಕೆ.ಆರ್. ನಗರ: ಜನಸಂಖ್ಯೆ ಹೆಚ್ಚಳದಿಂದ ದೇಶದ ಅಭಿವೃದ್ಧಿಗೆ ಮಾರಕವಾಗಲಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರಲಿದೆ. ಭವಿಷ್ಯದ ದೃಷ್ಟಿಯಿಂದ ಜನಸಂಖ್ಯೆ ನಿಯಂತ್ರಣ ಮಾಡಬೇಕು ಎಂದು ತಾಪಂ ಪ್ರಭಾರ ಅಧ್ಯಕ್ಷ ಸಾದಿಕ್ಖಾನ್ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕುಟುಂಬದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೆ ಉತ್ತಮ ಆರೋಗ್ಯದ ಜತೆಗೆ ಉನ್ನತ ಶಿಕ್ಷಣ ನೀಡಬಹುದು. ಆದ್ದರಿಂದ ಪ್ರತಿಯೊಬ್ಬರೂ ಜನಸಂಖ್ಯೆ ನಿಯಂತ್ರಣದತ್ತ ಗಮನಹರಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮಕ್ಕೂ ಮೊದಲು ವಿಶ್ವ ಜನಸಂಖ್ಯಾ ದಿನಾಚರಣೆ ಜಾಗೃತಿ ಜಾಥಾಕ್ಕೆ ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ ಚಾಲನೆ ನೀಡಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬಿದಿಗಳಲ್ಲಿ ಘೋಷಣಾ ಫಲಕಗಳನ್ನು ಹಿಡಿದು ಜನರಲ್ಲಿ ಜಾಗೃತಿ ಮೂಡಿಸಿದರು. ತಾಪಂ ಸದಸ್ಯರಾದ ಮಿರ್ಲೆ ಸೀತಾರಾಂ, ನಾಗಣ್ಣ, ಮೇಲೂರು ಕೃಷ್ಣೇಗೌಡ, ಡಾ.ಮಹೇಶ್ವರಪ್ಪ ಮಾತನಾಡಿದರು. ಪ್ರಭಾರ ಬಿಇಒ ಟಿ.ಎನ್.ಗಾಯತ್ರಿ, ಜಾಹ್ನವಿ ಸಂಪನ್ಮೂಲ ಕೇಂದ್ರದ ವ್ಯವಸ್ಥಾಪಕ ರಾಜು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಬಿ. ಅಶೋಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement