ನಾಲೆ ಸೇತುವೆ ಕಾಮಗಾರಿ ಪರಿಶೀಲನೆ
ಕೆ.ಆರ್. ನಗರ: ತಾಲೂಕಿನ ಹೊಸೂರು ಗ್ರಾಮದ ಬಳಿ ಕಟ್ಟೆಪುರ ನಾಲೆಗೆ 10 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ಜಲಸಂಪನ್ಮೂಲ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಂಗಸ್ವಾಮಿ ಪರಿಶೀಲಿಸಿದರು. ಸೇತುವೆ ನಿರ್ಮಾಣಕ್ಕೆ ಬಳಸುತ್ತಿರುವ ಸಿಮೆಂಟ್, ಮರಳು, ಕಬ್ಬಿಣ ಮತ್ತು ಜಲ್ಲಿಯನ್ನು ಉತ್ತಮವಾಗಿ ಬಳಸಿಕೊಂಡು ಕಾಮಗಾರಿ ನಿರ್ವಹಿಸುವುದರ ಜತೆಗೆ ಸ್ಥಳೀಯರು ಬಂದು ಮಾಹಿತಿ ಕೇಳಿದರೆ ಕಡ್ಡಾಯವಾಗಿ ನೀಡಬೇಕು ಎಂದು ತಿಳಿಸಿದರು. ಸಾರ್ವಜನಿಕರಿಂದ ಕಾಮಗಾರಿ ಗುಣಮಟ್ಟದ ಬಗ್ಗೆ ದೂರು ಬಂದರೆ ಬಿಲ್ ತಡೆ ಹಿಡಿಯುವುದಾಗಿ ಎಚ್ಚರಿಕೆ ನೀಡಿದ ಅವರು, ಸೇತುವೆಯು ಮುಖ್ಯ ರಸ್ತೆಯಲ್ಲಿರುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಸೂಚಿಸಿದರು.
ನಾಲೆಗೆ ನೀರು: ಮುಂಗಾರು ಬೆಳೆ ಬೆಳೆಯಲು ರೈತರಿಗೆ ಅನುಕೂಲವಾಗಲು ಚಾಮರಾಜ, ರಾಮಸಮುದ್ರ ಮತ್ತು ಮಿರ್ಲೆ ಶ್ರೇಣಿ ನಾಲೆಗಳಿಗೆ ಕಾವೇರಿ ನದಿಯಿಂದ ನೀರು ಹರಿಸುವ ಸಂಬಂಧ ಶಾಸಕ ಸಾ.ರಾ. ಮಹೇಶ್ ಅವರು ಶೀಘ್ರದಲ್ಲಿಯೇ ಅಧಿಕಾರಿಗಳ ಸಭೆ ಕರೆದು ದಿನಾಂಕ ನಿಗದಿಪಡಿಸಲಿದ್ದು, ನಂತರ ನಾಲೆಗೆ ನೀರು ಹರಿಸಲಾಗುವುದು ಎಂದು ಮಾಹಿತಿ ನೀಡಿದರು. ಸಹಾಯಕ ಎಂಜಿನಿಯರ್ ಮಂಜುನಾಥ್ ಇದ್ದರು.