ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕ್ರೀಡೆಯಲ್ಲಿ ಸೋಲು, ಗೆಲವು ಮುಖ್ಯವಲ್ಲ: ಗೋಪಾಲಯ್ಯ

Mainashree
Updated On : 24 Jul 2014, 10:28 am

ಹುಣಸೂರು: ಸ್ಪರ್ಧೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ, ಸ್ಪರ್ಧಾ ಮನೋಭಾವದಿಂದ ಭಾಗವಹಿಸುವುದು ಮುಖ್ಯ ಎಂದು ತಾಲೂಕು ದೈಹಿಕ ಪರಿವೀಕ್ಷಕ ಗೋಪಾಲಯ್ಯ ಹೇಳಿದರು.
ತಾಲೂಕಿನ ವಡೇರಹೊಸಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾಯೋಜಕತ್ವದಲ್ಲಿ ಗಾಗೇನಹಳ್ಳಿ ಪ್ರೌಢಶಾಲಾ ಆವರಣದಲ್ಲಿ ನಡೆದ ಉಪವಲಯ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸತತ ಪ್ರಯತ್ನದ ಮುಖಾಂತರವೇ ಯಶಸ್ಸು ಲಭಿಸುತ್ತದೆ. ಆದ್ದರಿಂದ ಮಕ್ಕಳು ಹೆಚ್ಚಿನ ಅಭ್ಯಾಸ ಮತ್ತು ಪರಿಶ್ರಮದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಮುಂದೆ ದೇಶವನ್ನು ಪ್ರತಿನಿಧಿಸುವ ಉತ್ತಮ ಕ್ರೀಡಾಪಟುಗಳಾಗುವಂತೆ ಕರೆ ನೀಡಿದರು. ವಡೇರಹಳ್ಳಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಈಶ್ವರೇಗೌಡ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷ ಅಶ್ವಿನಿ ಜಯಶಂಕರ್, ಗಾಗೇನಹಳ್ಳಿ ಪ್ರೌಢಶಾಲಾ ಮುಖ್ಯಶಿಕ್ಷಕ ಮಹದೇವಯ್ಯ, ಬಾಲರಾಜ್, ಮಾರುತಿ, ಸತ್ಯನಾರಾಯಣ, ಅಣ್ಣನಾಯ್ಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement