ಮೈಸೂರು

ಸಾಕ್ಷರತಾ ಯಶಸ್ಸಿಗೆ ಸಹಕಾರ ಅಗತ್ಯ

ಕೆ.ಆರ್. ನಗರ: ಸಾಕ್ಷರತಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಮತ್ತು ಪ್ರೇರಕರೊಂದಿಗೆ ಸಾರ್ವಜನಿಕರು ಮತ್ತು ಚುನಾಯಿತ ಜನಪ್ರತಿನಿಧಿಗಳು ಸಹಕರಿಸಬೇಕೆಂದು ಜಿಲ್ಲಾ ಸಾಕ್ಷರ ಸಮಿತಿಯ ಕಾರ್ಯಕ್ರಮ ಸಹಾಯಕ ತೇ.ಸಿ. ವಿಶ್ವೇಶ್ವರಯ್ಯ ಹೇಳಿದರು. ಪಟ್ಟಣದ ಅಕ್ಷತಾಹಾಲ್ನಲ್ಲಿ ಕೆ.ಆರ್. ನಗರ ತಾಲೂಕಲ್ಲಿ ಸಾಕ್ಷರತಾ ಸಂಯೋಜಕರಾಗಿ ಕಾರ್ಯನಿರ್ವಹಿಸಿ, ಶಿರಸಿಗೆ ವರ್ಗಾವಣೆಗೊಂಡಿರುವ ಬಿ.ಎಸ್. ಸುಬ್ಬೇಗೌಡರಿಗೆ ಪ್ರೇರಕರ ಸಂಘದಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನ ಸಾಕ್ಷರತಾ ಕಾರ್ಯಕ್ರಮಗಳು ಜಿಲ್ಲೆಯಲ್ಲಿಯೇ ತಾಲೂಕು ಮುಂಚೂಣಿಯಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು. ಸುಬ್ಬೇಗೌಡರ ಅವಧಿಯಲ್ಲಿ ತಾಲೂಕಿನ ಪ್ರೇರಕರು, ವಿವಿಧ ಇಲಾಖೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮಾಧ್ಯಮದವರು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವುದರ ಮೂಲಕ ಕಾರ್ಯಕ್ರಮದ ಬಗ್ಗೆ ಸರ್ವರಲ್ಲೂ ಆಸಕ್ತಿ ಮೂಡಿ ಅದರ ಯಶಸ್ವಿ ಸಾಧ್ಯವಾಯಿತು ಎಂದು ತಿಳಿಸಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ.ಕೆ.ಶಂಕರೇಗೌಡ ಮಾತನಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!