ಮೈಸೂರು

ಸ್ವಾರ್ಥಕ್ಕೆ ಪರಿಸರ ನಾಶ ಸಲ್ಲದು

ಹುಣಸೂರು: ಸಾರ್ವಜನಿಕರು ತಮ್ಮ ಸ್ವಾರ್ಥಕ್ಕಾಗಿ ಕಾಡು ಕಡಿದು ಪರಿಸರ ನಾಶ ಮಾಡುವ ಮೂಲಕ ಮನುಕುಲವನ್ನೇ ಅವನತಿಗೆ ತಳ್ಳಿಕೊಳ್ಳುತ್ತಿದ್ದಾರೆ ಎಂದು ಜಿಪಂ ಸದಸ್ಯ ದೇವರಾಜ್ ಅಭಿಪ್ರಾಯಪಟ್ಟರು.
ತಾಲೂಕಿನ ಕಟ್ಟೆಮಳಲವಾಡಿಯ ಪ್ರೌಢಶಾಲೆ ಆವರಣದಲ್ಲಿ ರೋಟರಿ ಸಂಸ್ಥೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕಟ್ಟೆಮಳಲವಾಡಿ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಇದಕ್ಕೆ ಸರ್ಕಾರ ಅನುದಾನ ನೀಡಿದರೆ ಪ್ರಯೋಜನವಿಲ್ಲ. ಪ್ರತಿಯೊಬ್ಬರಿಗೂ ಅರಿವು ಬಂದಾಗ ಮಾತ್ರ ಉತ್ತಮ ವಾತಾವರಣ ಕಾಪಾಡಲು ಸಾಧ್ಯ ಎಂದು ಹೇಳಿದರು.
ಹುಣಸೂರು ಉಪ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿ ಪ್ರಸನ್ನಕುಮಾರ್ ಮಾತನಾಡಿ, ನಾವು ನೀಡಿರುವ ಸಸಿಗಳನ್ನು ಆರೋಗ್ಯ ಪೂರ್ಣವಾಗಿ ಬೆಳೆಸಿದಲ್ಲಿ ನೀವು ದೇಶಕ್ಕೆ ನೀಡುವ ಕೊಡುಗೆ ಎಂದು ಹೇಳಿದರು.
ವಲಯ ಅರಣ್ಯಾಧಿಕಾರಿ ಶಿವರಾಮ್ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬರು ಬಳಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಕಾರ ನೀಡುವಂತೆ ಮನವಿ ಮಾಡಿದರು.
ಎಸ್ಡಿಎಂಸಿ ಅಧ್ಯಕ್ಷ ನಿಂಗರಾಜ ಮಲ್ಲಾಡಿ, ರೋಟರಿ ಅಧ್ಯಕ್ಷ ಧರ್ಮಾಪುರ ನಾರಾಯಣ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೋಟರಿ ಶಾಲಾ ಸಮಿತಿ ಅಧ್ಯಕ್ಷ ರಾಜಶೇಖರ್, ಕಟ್ಟೆಮಳಲವಾಡಿ ಗ್ರಾಪಂ ಅಧ್ಯಕ್ಷ ಶಿವಣ್ಣನಾಯ್ಕ, ಉಪಾಧ್ಯಕ್ಷೆ ದಿಲ್ಷನ್, ರೋಟರಿ ಉಪಾಧ್ಯಕ್ಷ ಸ್ವಾಮಿಗೌಡ, ಕಾರ್ಯದರ್ಶಿ ಶಿವಕುಮಾರ್ ವಿ. ರಾವ್, ಸದಸ್ಯರಾದ ತಂಗಮಾರಿಯಪ್ಪನ್, ಎಚ್.ಎಸ್.ಸಚ್ಚಿತ್, ನಟರಾಜ್, ಕಾಂಗ್ರೆಸ್ ಮುಖಂಡ ನಸ್ರುಲ್ಲಾಖಾನ್, ಗ್ರಾಪಂ ಸದಸ್ಯರಾದ ತಾಂಡವಮೂರ್ತಿ, ಆಂಜನೇಯ, ಮುಖ್ಯಶಿಕ್ಷಕ ಕೆ.ಕಾಂತರಾಜು, ಸಹಶಿಕ್ಷಕ ಮಹದೇವ್ ಇದ್ದರು. ಮಹದೇವ್ ನಿರೂಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!