ಮೈಸೂರು

ಬರ ಪರಿಸ್ಥಿತಿ ಅಧ್ಯಯನ

ಭೇರ್ಯ: ಈ ವರ್ಷವೂ ಮಳೆಯಾಗದ ಹಿನ್ನೆಲೆ ಜಿಲ್ಲೆಯ ಕೆಲವು ತಾಲೂಕುಗಳು ಬರಪೀಡಿತವಾಗಿದ್ದು, ಜಿಲ್ಲೆಯ ಎಲ್ಲ ತಾಲೂಕಿಗೂ ಭೇಟಿ ನೀಡಿ ಪಕ್ಷದಿಂದ ಬರ ಪರಿಸ್ಥಿತಿ ಅಧ್ಯಯನ ಮಾಡಿ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಿಗೆ ವರದಿ ನೀಡುವುದಾಗಿ ಬಿಜೆಪಿ ಜಿಲಾಧ್ಯಕ್ಷ ಹೇಮಂತಕುಮಾರ್ ಗೌಡ ಮತ್ತು ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಹೇಳಿದರು.
ಕೆ.ಆರ್. ನಗರ ತಾಲೂಕು ವ್ಯಾಪ್ತಿಯ ಬಟಿಗನಹಳ್ಳಿ, ಕೊಡಿಯಾಲ, ಹನುಮಮಹಳ್ಳಿ ಗ್ರಾಮಗಳಲ್ಲಿ ಕೆರೆಕಟ್ಟೆ ಮತ್ತು ಬೆಳೆಗಳ ಪರಿಸ್ಥಿತಿ ಅಧ್ಯಯನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದರು ಸಹ ಸರ್ಕಾರ ಯಾವುದೇ ರೀತಿಯಲ್ಲಿ ಒಂದು ನಯಾ ಪೈಸಾ ಹಣ ಬಿಡುಗಡೆ ಮಾಡದಿರುವುದು ನಾಚಿಕೆಗೇಡಿನ ಸಂಗತಿ. ಬರದಿಂದಾಗಿ ರೈತರು ತತ್ತರಿಸಿದ್ದಾರೆ. ಅವರ ಕಣ್ಣೀರು ಸರ್ಕಾರಕ್ಕೆ ತಟ್ಟಲಿದೆ ಎಂದು ಟೀಕಿಸಿದರು.
ಕೆರೆಕಟ್ಟೆಗಳಿಗೆ ಸರಿಯಾದ ಸಮಯದಲ್ಲಿ ನೀರು ತುಂಬಿಸದೆ ಜಾನುವಾರಗಳಿಗೆ ಕುಡಿಯಲು ನೀರು ಮತ್ತು ಮೇವಿಲ್ಲದೆ ರೈತರು ಪರಿತಪಿಸುವಂತಾಗಿದೆ. ಈ ಕೂಡಲೇ ಗೋಶಾಲೆಗಳನ್ನು ತೆರೆಯುವಂತೆ ಒತ್ತಾಯಿಸಿದ ಅವರು, ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು. ರಾಜ್ಯದ ಎಲ್ಲ ಜಿಲ್ಲೆಗಳ ರೈತ ಮೋರ್ಚಾ ಅಧ್ಯಕ್ಷರು ಮತ್ತು ಜಿಲಾಧ್ಯಕ್ಷರು ಸೇರಿದಂತೆ ಆಯಾ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಿ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಆರಗ ಜ್ಞಾನೇಂದ್ರ ಅವರಿಗೆ ನೀಡಿ ಅವರ ಅಧ್ಯಕ್ಷತೆಯಲ್ಲಿ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ವರದಿ ಸಲ್ಲಿಸಿ, ನಂತರ ವರದಿ ಆಧಾರದ ಮೇಲೆ ಸರ್ಕಾರ ವಿರುದ್ಧ ಅತಿ ಶೀಘ್ರದಲ್ಲೆ ಬೃಹತ್ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.
ಇದೇ ವೇಳೆ ಬಿಜೆಪಿ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಕಾರ್ಯದರ್ಶಿ ಬಾಲಕೃಷ್ಣ, ಬಿಜೆಪಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಭೇರ್ಯ ಶಕ್ತಿ ಕೇಂದ್ರದ ಅಧ್ಯಕ್ಷ ತೇಜಸ್, ತಾಲೂಕು ರೈತ ಮೋರ್ಚಾ ಅಧ್ಯಕ್ಷ ಪಾಲಾಕ್ಷ, ಪ್ರಧಾನ ಕಾರ್ಯದರ್ಶಿ ಪ್ರವೀಣ್, ಉಪಾಧ್ಯಕ್ಷ ನಂಜುಂಡಸ್ವಾಮಿ, ಬಿಜೆಪಿ ಮುಖಂಡ ಮಹೇಶ್, ಕೋಡಿಯಾಲ ವಿಜಯ್ಕುಮಾರ್, ಹರೀಶ್, ರಾಜೇಂದ್ರ, ಸ್ವಾಮಿಗೌಡ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ