ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಬಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

Srinivasa Murthy VN
Updated On : 30 Jul 2014, 1:09 am

ಕ.ಪ್ರ. ವಾರ್ತೆ, ಮೈಸೂರು, ಜು.29
ಪಿರಿಯಾಪಟ್ಟಣ ತಾಲೂಕಿನ ಹಳೆಕೆರೆ ಹಾಡಿಯಲ್ಲಿ ಅಕ್ರಮ ಮದ್ಯ ಸೇವಿಸಿ ದಂಪತಿ ಮೃತಪಟ್ಟಿರುವುದಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಜಯ ಅವರ ಶವದೊಂದಿಗೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಮಂಗಳವಾರ ಪ್ರತಿಭಟಿಸಿದರು.
ಮೈಸೂರಿನ ಕುವೆಂಪು ನಗರದಲ್ಲಿರುವ ಅಬಕಾರಿ ಜಂಟಿ ಉಪ ಆಯಕ್ತರ ಕಚೇರಿ ಎದುರು ಜಯ ಅವರ ಶವದೊಂದಿಗೆ ಪ್ರತಿಭಟಿಸಿದ ಅವರು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಹಾಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸಲು ಅಬಕಾರಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಾಗಿ ಕಿಡಿಕಾರಿದರು.
ಅಬಕಾರಿ ಉಪ ಆಯುಕ್ತ ಶಿವಣ್ಣೇಗೌಡ, ತಹಸೀಲ್ದಾರ್ ನವೀನ್ ಜೋಸೆಫ್ ಅವರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರ ಬೇಡಿಕೆ ಆಲಿಸಿದರು. ಜಿಲ್ಲಾಧಿಕಾರಿಯವರ ಸೂಚನೆ ಮೇರೆಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ ಎಂದು ತಹಸೀಲ್ದಾರ್ ನವೀನ್ ಜೋಸೆಫ್ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಉಪ ಆಯುಕ್ತ ಶಿವಣ್ಣೇಗೌಡ, ಹಾಡಿಯ ಕುಮಾರ್ ಮತ್ತು ಜಯಮ್ಮ ದಂಪತಿ ವಿಷ ಸೇವಿಸಿ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಂದ ಬಳಿಕ ಸ್ಪಷ್ಟ ಕಾರಣ ಗೊತ್ತಾಗಲಿದೆ. ಹಾಡಿಯಲ್ಲಿ ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ದಾಳಿ ನಡೆಸಿ, ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement