ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಣಗಾಲುವಿನಲ್ಲಿ ಆರೋಗ್ಯ ತಪಾಸಣೆ

Rashmi Kasaragodu
Updated On : 30 Jul 2014, 11:25 am

ಬೈಲಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಕಣಗಾಲು ಗ್ರಾಮದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರವನ್ನು ಸೋಮವಾರ ಏರ್ಪಡಿಸಲಾಗಿತ್ತು. ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ ಸಹಯೋಗದೊಂದಿಗೆ ಏರ್ಪಡಿಸಿದ್ದ ಶಿಬಿರದಲ್ಲಿ 500ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಚಿಕಿತ್ಸೆ ಪಡೆದುಕೊಂಡರು.
ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಪರಮೇಶ್, ಮೇಲ್ವಿಚಾರಕ ರಮೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಟಿ.ಹನುಮಂತ, ಉಪಾಧ್ಯಕ್ಷ ಎಚ್.ಪಿ.ವೀರತ್ತಪ್ಪ, ನಿರ್ದೇಶಕರಾದ ಕೃಷ್ಣೇಗೌಡ, ನರಸೇಗೌಡ, ಎಚ್.ಕೆ.ರಾಜಪ್ಪ, ಸಿ.ಎಸ್. ಜಗದೀಶ್, ಸರಸ್ವತಿ, ನರಸಮ್ಮ, ಎಸ್. ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement