ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪ್ರತಿಭೆ ವಿಕಸನಕ್ಕೆ ಕ್ರೀಡಾಕೂಟಗಳು ಸಹಕಾರಿ

Rashmi Kasaragodu
Updated On : 30 Jul 2014, 11:26 am

ಟಿ. ನರಸೀಪುರ: ಕ್ರೀಡಾ ಪ್ರತಿಭೆಯಿರುವ ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳು ಉತ್ತಮ ವೇದಿಕೆ ಕಲ್ಪಿಸಿಕೊಡುತ್ತವೆ ಎಂದು ಗರ್ಗೇಶ್ವರಿ ಜಿಪಂ ಕ್ಷೇತ್ರದ ಸದಸ್ಯ ಕೆ.ಮಹದೇವ ಹೇಳಿದರು.
ತಾಲೂಕಿನ ತುಂಬಲ ಗ್ರಾಮದಲ್ಲಿ ನವಚೇತನ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಪರಿಶ್ರಮಕ್ಕೆ ಪ್ರತಿಫಲ ಕಟ್ಟಿಟ್ಟ ಬುತ್ತಿಯಾಗಿದೆ. ಸೋಲು-ಗೆಲುವನ್ನು ಸಮಾನತೆಯಿಂದ ಸ್ವೀಕರಿಸಿ, ಪ್ರಾಮಾಣಿಕತೆಯಿಂದ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ತಿಳಿಸಿದರು.
ಜಿಪಂ ಕ್ಷೇತ್ರದ ಸದಸ್ಯೆ ರೇಣುಕ ನಾಗರಾಜು ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕ್ರೀಡಾಪಟುಗಳಾಗಿ ಹೊರಹೊಮ್ಮಲು ಹೋಬಳಿ ಮಟ್ಟದ ಕ್ರೀಡಾಕೂಟಗಳು ನೆರವಾಗುತ್ತಿವೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪತ್ತೆ ಹಚ್ಚಿ ಕ್ರೀಡೆಯಲ್ಲೂ ಸಾಧನೆಗೈಯಲು ಪ್ರೇರಣೆ ನೀಡಬೇಕು. ಪ್ರಾಥಮಿಕ ಹಂತದಲ್ಲಿಯೇ ಕ್ರೀಡಾ ಮನೋಭಾವನೆ ಬೆಳೆಸಬೇಕೆಂದು ಹೇಳಿದರು.
ಯೋಜನಾ ಮತ್ತು ಕ್ರೀಡಾಧಿಕಾರಿ ಸುರೇಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳಿಗೆ ಉತ್ತೇಜನ ನೀಡಬೇಕಾದ್ದರಿಂದ ತುಂಬಲ ಗ್ರಾಮದಲ್ಲಿರುವ ನವಚೇತನ ಕ್ರೀಡಾಂಗಣದ ಅಭಿವೃದ್ಧಿಗೆ ಕ್ರೀಡಾ ಇಲಾಖೆಯಿಂದ ಒಂದು ಲಕ್ಷ ರು. ಗಳ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಕ್ರೀಡಾ ಜ್ಯೋತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ ಸ್ವೀಕರಿಸಿದರು. ತಾಪಂ ಮಾಜಿ ಅಧ್ಯಕ್ಷ ಅಂದಾನಿ ಅಧ್ಯಕ್ಷತೆ ವಹಿಸಿದ್ದರು. ಕಸಬಾ ಹೋಬಳಿ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಸ್ಥಳೀಯ ಕ್ರೀಡಾಭಿಮಾನಿ ಲೋಕೇಶ್ ವಿಜೇತ ಕ್ರೀಡಾಪಟುಗಳಿಗೆ ಬಹುಮಾನವನ್ನು ಬಳುವಳಿಯಾಗಿ ನೀಡಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಗಂಗಾಧರ, ಉಪಾಧ್ಯಕ್ಷ ಕುಪ್ಯ ಪುಟ್ಟಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಚುಂಚೇಗೌಡ, ಸದಸ್ಯ ಗವಿಸಿದ್ದಯ್ಯ, ಮುಖ್ಯ ಶಿಕ್ಷಕ ಗಂಗಾಧರಸ್ವಾಮಿ, ದೈಹಿಕ ಪರಿವೀಕ್ಷಣಾಧಿಕಾರಿ ಸಂಪತ್ ದೊರೈರಾಜ್, ದೈಹಿಕ ಶಿಕ್ಷಕರಾದ ಶಶಿಧರ್, ಶ್ರೀಕಂಠಯ್ಯ, ಸುಬ್ಬುಶೆಟ್ಟಿ, ಪುಟ್ಟಸ್ವಾಮಿ, ತಾಪಂ ಮಾಜಿ ಸದಸ್ಯೆ ಕಲಾವತಿ ಬಸವರಾಜು, ಎಸ್ಡಿಎಂಸಿ ಸದಸ್ಯ ಶಿವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement