ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೂತ್ರಪಿಂಡ ರೋಗ ವಿಚಾರ ಸಂಕಿರಣ

Rashmi Kasaragodu
Updated On : 30 Jul 2014, 11:20 am

ಮೈಸೂರು: ಜೆಎಸ್ಎಸ್ ವಿಶ್ವವಿದ್ಯಾಲಯ ಹಾಗೂ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪೆಥಾಲಜಿ ಮತ್ತು ನೆಫ್ರಾಲಜಿ ವಿಭಾಗದಿಂದ ಅಂತಾರಾಷ್ಟ್ರೀಯ ಮಟ್ಟದ ಮೂತ್ರಪಿಂಡ ರೋಗಗಳ ಬಗ್ಗೆ ವಿಚಾರ ಸಂಕಿರಣವನ್ನು ಆ.1 ರಂದು ಜೆಎಸ್ಎಸ್ ಆಸ್ಪತ್ರೆಯ ಮೂರನೇ ಮಹಡಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಬಿ.ಎನ್.ಬೆಟ್ಕೆರೂರ್, ಜೆಎಸ್ಎಸ್ ವಿವಿ ಕುಲಸಚಿವ ಡಾ.ಬಿ.ಮಂಜುನಾಥ, ಜೆಎಸ್ಎಸ್ ಆಸ್ಪತ್ರೆಯ ನಿರ್ದೇಶಕ ಡಾ.ಆರ್.ಕೆ.ಚತುರ್ವೇದಿ, ಐಎಸ್ಆರ್ಟಿಪಿ ಅಧ್ಯಕ್ಷ ಡಾ.ಅಮಿತ್ ದಿಂಡ, ಶೈಕ್ಷಣಿಕ ವಿಭಾಗದ ನಿರ್ದೇಶಕ ಡಾ.ಪಿ.ಎ.ಕುಶಾಲಪ್ಪ, ಪ್ರಾಂಶುಪಾಲ ಡಾ.ಎಚ್.ಬಸವನಗೌಡಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಎಂ.ಗುರುಸ್ವಾಮಿ ಭಾಗವಹಿಸುವರು ಎಂದು ಐಎಸ್ಆರ್ಟಿಪಿ ಸಂಯೋಜಕ ಡಾ.ಜಿ.ವಿ. ಮಂಜುನಾಥ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಮ್ಮೇಳನಕ್ಕೆ ದೇಶ ಮತ್ತು ವಿದೇಶದ 14 ತಜ್ಞರು ವಿಚಾರ ಮಂಡಿಸುವರು. ಸಕ್ಕರೆ ಕಾಯಿಲೆ, ರಕ್ತದೊತ್ತಡ ಮತ್ತು ಇತರೆ ರೋಗಗಳಿಂದ ಮೂತ್ರಪಿಂಡದ ಮೇಲೆ ಆಗುವ ದುಷ್ಪರಿಣಾಮಗಳನ್ನು ವಿಶೇಷವಾಗಿ ಚರ್ಚಿಸಲಿದ್ದಾರೆ. ಸುಮಾರು 300ಕ್ಕೂ ಹೆಚ್ಚು ವೈದ್ಯರು ಭಾಗವಹಿಸುವರು. 100ಕ್ಕೂ ಹೆಚ್ಚು ವೈಜ್ಞಾನಿಕ ಭಿತ್ತಿ ಚಿತ್ರಗಳು ಪ್ರದರ್ಶನವಾಗಲಿವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement