ಮಹಿಳೆ, ಮಕ್ಕಳ ದೌರ್ಜನ್ಯದ ವಿರುದ್ಧ ಜಾಗೃತಿ ಜಾಥಾ
ಮೈಸೂರು: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಗುರುವಾರ ಗ್ರಾಪಂ ಮಟ್ಟದಲ್ಲಿ ಅರಿವು ಜಾಥಾ ಹಾಗೂ ವಿಶೇಷ ಗ್ರಾಮಸಭೆಗಳು ನಡೆಯಿತು.
ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಮತ್ತು ಇತರೆ ಇಲಾಖೆಗಳು ಸಂಯುಕ್ತವಾಗಿ ಈ ಕಾರ್ಯಕ್ರಮ ಆಯೋಜಿಸಿತ್ತು. ಮೈಸೂರು ತಾಲೂಕಿನ ಶ್ರೀರಾಂಪುರ ಗ್ರಾಪಂ ವತಿಯಿಂದ ಅಶ್ವಿನಿ ಕಲ್ಯಾಣಮಂಟಪದಲ್ಲಿ ನಡೆದ ಜಿಲ್ಲಾ ಮಟ್ಟದ ಈ ಸಮಾರಂಭವನ್ನು ಜಿಪಂ ಅಧ್ಯಕ್ಷೆ ಡಾ. ಪುಷ್ಪಾವತಿ ಅಮರನಾಥ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಡಾ. ಪುಷ್ಪಾವತಿ, ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು. ವಕೀಲೆ ಸುಮನಾ, ಜಿಪಂ ಸದಸ್ಯ ಪಟೇಲ್ ಜವರೇಗೌಡ, ಜಿಪಂ ಸಿಇಒ ಪಿ.ಎ. ಗೋಪಾಲ್, ತಾಪಂ ಇಒ ಅರುಣ್ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎನ್.ಆರ್. ವಿಜಯ್, ಗ್ರಾಪಂ ಅಧ್ಯಕ್ಷೆ ದೇವಮ್ಮ, ಉಪಾಧ್ಯಕ್ಷ ಮಹದೇವ್ ಇದ್ದರು.