ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪರಿಸರ ಪ್ರಜ್ಞೆಗೆ ಚಿತ್ರಕಲಾ ಸ್ಪರ್ಧೆ

Rashmi Kasaragodu
Updated On : 4 Jun 2014, 1:15 am

ಮೈಸೂರು: ಪರಿಸರ ಪ್ರಜ್ಞೆ ಮೂಡಿಸುವ ಸಲುವಾಗಿ ವಿಶೇಷ ಚೇತನ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆಯನ್ನು ಮೃಗಾಲಯದಲ್ಲಿ ಮಂಗಳವಾರ ನಡೆಸಲಾಯಿತು.
ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಈ ಸ್ಪರ್ಧೆಯಲ್ಲಿ ಅಂಗವಿಕಲ ಹಾಗೂ ಬುದ್ಧಿಮಾಂದ್ಯ ಮಕ್ಕಳು ಭಾಗವಹಿಸಿದ್ದರು.
ಮರ ಗಿಡಗಳು, ಪ್ರಾಣಿ ಪಕ್ಷಿಗಳು ಹಾಗೂ ಬೆಟ್ಟ ಗುಡ್ಡ ಈ ಮುಂತಾದ ಪ್ರಕೃತಿಯ ಚಿತ್ರಗಳನ್ನು ಬಿಡಿಸುವಲ್ಲಿ ಪ್ರಯತ್ನಿಸುವ ಮೂಲಕ ಮಕ್ಕಳು ಸಂಭ್ರಮಿಸಿದರು. ನಗರದ ರೋಟರಿ ಪಶ್ಚಿಮ ಶಾಲೆ, ಡಿಎಂಎಸ್ ಶಾಲೆ, ಅಶಿಯಾನ ವಿಶೇಷ ಶಾಲೆ ಹಾಗೂ ಸಿಎಫ್‌ಟಿಆರ್ ಶಾಲೆಯ 30ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೃಗಾಲಯದ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ರವಿ ಹಾಗೂ ಮತ್ತಿತರ ಅಧಿಕಾರಿಗಳು ಇದ್ದರು.
ನಾಳೆ ಬಹುಮಾನ: ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೃಗಾಲಯದ ಸಭಾಂಗಣದಲ್ಲಿ ಜೂ.5 ರಂದು ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement