ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಉಪ ಕಸುಬಾಗಿ ಹೈನುಗಾರಿಕೆ

Srinivasa Murthy VN
Updated On : 4 Jun 2014, 9:49 am

ಕ.ಪ್ರ.ವಾರ್ತೆ ಟಿ.ನರಸೀಪುರ ಜೂ.4
ಹೈನುಗಾರಿಕೆ ಉಪಕಸುಬನ್ನು ಆರಂಭಿಸಿ, ಆರ್ಥಿಕವಾಗಿ ಮಹಿಳೆಯರು ಅಭಿವೃದ್ಧಿಯಾಗಬೇಕು ಎಂದು ಭೈರಾಪುರ ಹಾಲು ಉತ್ಪಾದಕರ ಸಹಕಾರ ಮಹಿಳಾ ಸಂಘದ ಅಧ್ಯಕ್ಷೆ ರಾಜಮ್ಮ ಹೇಳಿದರು.
ಪಟ್ಟಣದ ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಹಾಲು ವಿತರಿಸಿ ಮಾತನಾಡಿದ ಅವರು, ಡಾ.ವರ್ಗಿಸ್ ಕುರಿಯನ್ ಅವರು ಹೈನುಗಾರಿಕೆ ಅಭಿವೃದ್ಧಿಪಡಿಸಿದ ಪರಿಣಾಮ ರೈತರು ಮತ್ತು ಮಹಿಳೆಯರ ಬದುಕು ಉತ್ತಮಗೊಳ್ಳುತ್ತಿದೆ ಎಂದು ತಿಳಿಸಿದರು.
ಹೈನುಗಾರಿಕೆಯನ್ನು ಅವಲಂಬಿಸಿರುವ ಮಹಿಳೆಯರು ಮತ್ತು ರೈತರು ನೋಂದಾಯಿತ ಸಹಕಾರ ಸಂಘಗಳಲ್ಲಿ ಹಾಲು ಹಾಕುವ ಮೂಲಕ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಹಾಲಿನ ಮಹತ್ವ ತಿಳಿಸಲು ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲಾ ಮಕ್ಕಳು ಪ್ರತಿನಿತ್ಯವೂ ಹಾಲನ್ನು ಕುಡಿಯುವ ಮೂಲಕ ಆರೋಗ್ಯವಂತರಾಗಬೇಕೆಂದು ಕರೆ ನೀಡಿದರು.
ಸಂಘದ ಉಪಾಧ್ಯಕ್ಷೆ ಪಾರ್ವತಿ, ಕಾರ್ಯದರ್ಶಿ ಭಾರತಿ, ನಿರ್ದೇಶಕರಾದ ಜಯಮ್ಮ, ಭ್ರಮರಾಂಭ, ಲಕ್ಷ್ಮಮ್ಮ, ಭಾಗ್ಯಮ್ಮ, ಶೋಭ ಇದ್ದರು.

ಕೆಆರ್‌ಎಂಗೆ ಅವಕಾಶ ನೀಡಲು ಆಗ್ರಹ
ನಂಜನಗೂಡು: ಒಣಭೂಮಿ ಮಾಜಿ ಅಧ್ಯಕ್ಷ ಕೆ.ಆರ್.ಮೋಹನಕುಮಾರ್ ಅವರಿಗೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ಪಟ್ಟಣ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
30 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಪಕ್ಷ ಸಂಘಟನೆಗೆ ತೊಡಗಿಸಿಕೊಂಡು ತಮ್ಮ ರಾಜಕೀಯ ಜೀವನದಲ್ಲಿ ಎಂದೂ ಕಪ್ಪು ಮಚ್ಚೆ ಬಾರದ ಹಾಗೆ ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರ ಅನುಯಾಯಿಯಾಗಿ ರಾಜಕೀಯ ಸೇವೆ ಸಲ್ಲಿಸಿರುವ ಇವರಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಪುರಸಭಾ ಮಾಜಿ ಉಪಾಧ್ಯಕ್ಷ ಎನ್. ಇಂದ್ರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಪುರಸಭಾ ಸದಸ್ಯರಾದ ನಿಂಗಪ್ಪ, ಸುಂದರ ರಾಜು, ಮಾಜಿ ಅಧ್ಯಕ್ಷ ಎನ್.ಆರ್. ದೊರೆಸ್ವಾಮಿ, ಮಾಜಿ ಸದಸ್ಯರಾದ ಸೈಯದ್ ನಾಸಿರ್, ಸೌಭಾಗ್ಯ, ಮಾಜಿ ಪ್ರಧಾನ ಕಿಟ್ಟಪ್ಪ, ಶಂಕರಪುರ ಶ್ರೀಕಂಠ, ಬಿಂಬ ಮನೋಹರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement