ಸಸಿ ನೆಡುವ ಮೂಲಕ ಪರಿಸರ ರಕ್ಷಿಸಿ
ಕೆ.ಆರ್. ನಗರ: ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಿಸಬೇಕೆಂದು ಗ್ರಾಪಂ ಅಧ್ಯಕ್ಷೆ ಬಿ.ಕೆ. ಭವ್ಯಬಲರಾಮು ಹೇಳಿದರು.
ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಸರ್ಕಾರಿ ಫ್ರೌಢಶಾಲೆ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರ ದಿನಾಚರಣೆಯನ್ನು ಆಚರಿಸಿದ ನಂತರ ಮಾತನಾಡಿದ ಅವರು, ಸರ್ಕಾರಿ ಶಾಲೆ, ಖಾಸಗಿ ಶಾಲೆ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ಹೆಚ್ಚಾಗಿ ಬೆಳೆಸಬೇಕು. ಜೊತೆಗೆ ಸಾರ್ವಜನಿಕರು ಸಸಿಗಳನ್ನು ನೆಡುವ ಮತ್ತು ಅವುಗಳನ್ನು ಸಂರಕ್ಷಿಸುವ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ಪರಿಸರ ಉಳಿಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬಹುದು ಎಂದು ಅಭಿಪ್ರಾಯಪಟ್ಟರು.
ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಸಿ.ಸ್ವಾಮೀಗೌಡ, ಮುಖ್ಯ ಶಿಕ್ಷಕ ಜಿ.ಆರ್.ಶಿವರಾಮು, ಶಿಕ್ಷಕರಾದ ರೇವಣ್ಣ ಕೋಟ್ಯಾಳ್, ನಾಗರಾಜ ಹಾಲಬಾವಿ, ಲಕ್ಷ್ಮಪ್ಪ, ಮಂಜುನಾಥ್, ಎಸ್. ಸುರೇಶ್, ಜಿ. ಪುರುಷೋತ್ತಮ್, ಎನ್.ಎಚ್. ದಿನೇಶ್ ಇದ್ದರು.