ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಆಗತ್ಯ: ಡಾ. ಯಮುನಾ

Rashmi Kasaragodu
Updated On : 10 Jun 2014, 1:01 am

ಹುಣಸೂರು: ಬೇಸಿಗೆ ಕಳೆದು ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಸೊಳ್ಳೆಯಿಂದ ಹರಡುವ ಕಾಯಿಲೆಗಳಾದ ಮಲೇರಿಯಾ, ಕಾಲರಾ, ಡೇಂಘೀ ಕಂಡು ಬರುತ್ತಿವೆ. ಇವುಗಳ ಬಗ್ಗೆ ಕಾಳಜಿ ವಹಿಸಿ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ. ಯಮುನಾ ಹೇಳಿದರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ತಾಲೂಕು ಆರೋಗ್ಯ ಇಲಾಖೆ, ಬೋಳನಹಳ್ಳಿ ಗ್ರಾಪಂ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ತೆಂಕಲಕೊಪ್ಪಲಿನಲ್ಲಿ ಏರ್ಪಡಿಸಿದ್ದ ಮಲೇರಿಯಾ ರೋಗ ನಿಯಂತ್ರಣ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕು ಆಡಳಿತದಿಂದ ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಆದರೂ ಜನರು ಎಚ್ಚರದಿಂದಿರಬೇಕು ಎಂದರು. ಡಾ.ಟಿ.ಸಿ. ಪೂರ್ಣಿಮಾ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಜನರ ಜೀವನ ಅತ್ಯುತ್ತಮ ಪಡಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಅನೇಕ ಆರೋಗ್ಯ ಅಭಿಯಾನಗಳನ್ನು ಕೈಗೊಳ್ಳುತ್ತಿವೆ. ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಪಡೆದು ತಮ್ಮ ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮಹದೇವಪ್ಪ, ಪುಷ್ಪಲತಾ, ನಾಗರಾಜು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅನೇಕ ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement