ಗಣರಾಧನಾ ಮಹೋತ್ಸವ
ಪಿರಿಯಾಪಟ್ಟಣ: ತಾಲೂಕಿನ ಬೆಟ್ಟದಪುರದಲ್ಲಿರುವ ಸ್ವತಂತ್ರ ಸಲೀಲಾಖ್ಯ ವಿರಕ್ತಮಠ ಮತ್ತು ಕನ್ನಡ ಮಠದಲ್ಲಿ ಜೂ.14 ರಂದು ಗಣರಾಧನಾ ಮಹೋತ್ಸವ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶ್ರೀ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ ಸಮ್ಮುಖ ವಹಿಸುವರು. ಸಂಸದ ಪ್ರತಾಪ್ ಸಿಂಹ ಡಿಪಿಆರ್ ಬಿಡುಗಡೆಗೊಳಿಸಲಿದ್ದು, ಶಾಸಕರಾದ ಸಾ.ರಾ.ಮಹೇಶ್ವಹಿಸುವರು. ಲಿಂಗೈಕ್ಯರಾದ ಶ್ರೀ ಬಸವಲಿಂಗ ಸ್ವಾಮೀಜಿ, ಶ್ರೀ ಸಿದ್ಧಲಿಂಗಸ್ವಾಮಿಗಳಿಗೆ ನುಡಿ ನೈವೇದ್ಯ, ಯುವ ಚೇತನ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಪರವಶಿಮೂರ್ತಿ ಸ್ವಾಮೀಜಿ, ಶ್ರೀ ಸದಾಶಿವ ಸ್ವಾಮೀಜಿಗೆ ಸನ್ಮಾನಿಸಲಾಗುವುದು.