ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಜನಸಂಖ್ಯೆ ಹೆಚ್ಚಳದಿಂದ ಬಾಲಕಾರ್ಮಿಕತೆ ವೃದ್ಧಿ

Rashmi Kasaragodu
Updated On : 13 Jun 2014, 2:02 am

ಹುಣಸೂರು: ದೇಶದ ಬಡತನ, ಅನಕ್ಷರತೆ, ಮೌಢ್ಯತೆ ಹಾಗೂ ಜನಸಂಖ್ಯೆ ಹೆಚ್ಚಳದಿಂದ ಬಾಲಕಾರ್ಮಿಕ ಪದ್ಧತಿ ವೃದ್ಧಿಯಾಗುತ್ತಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ನೀಡಿದರೆ ಮಾತ್ರ ಈ ಪದ್ಧತಿ ನಿರ್ಮೂಲನೆ ಮಾಡಬಹುದು ಎಂದು ಪಟ್ಟಣದ ಕಿರಿಯ ಶ್ರೇಣಿ ನ್ಯಾಯಾಧೀಶ ವೀರಭದ್ರಯ್ಯ ಅಭಿಪ್ರಾಯಪಟ್ಟರು.
ಪಟ್ಟಣದ ಮುನೇಶ್ವರ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಬಡತನ ಮತ್ತು ಅನಕ್ಷರತೆಯಿಂದ ಪೋಷಕರು ತಮ್ಮ ಮಕ್ಕಳನ್ನು ಅನಿವಾರ್ಯವಾಗಿ ಕೂಲಿಗೆ ತಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಅರಿವು ಮೂಡಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರದೊಂದಿಗೆ ಕೈ ಜೋಡಿಸಬೇಕಿದೆ ಎಂದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶಾಲಾ ಮಕ್ಕಳು ನಾಮಫಲಕಗಳನ್ನು ಹಿಡಿದು ಬಾಲ ಕಾರ್ಮಿಕ ಪದ್ಧತಿ ವಿರೋಧಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ಪುರಸಭೆ ಮೈದಾನದಲ್ಲಿ ಎಲ್ಲಾ ಮಕ್ಕಳಿಗೆ ಉಪನ್ಯಾಸ ಏರ್ಪಡಿಸಲಾಗಿತ್ತು.
ಪುರಸಭೆ ಮುಖ್ಯಾಧಿಕಾರಿ ರಮೇಶ್, ಸಿಡಿಪಿಒ ನವೀನ್‌ಕುಮಾರ್, ತಾಲೂಕು ಕಾರ್ಮಿಕ ನಿರೀಕ್ಷಕ ಶಶಿಧರ್, ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಪರಿಸರ ಎಂಜಿನಿಯರ್ ರವಿಕುಮಾರ್, ಮಂಜುಳ, ಡೀಡ್ ಸಂಸ್ಥೆ ನಿರ್ದೇಶಕ ಶ್ರೀಕಾಂತ್, ಪ್ರಾಧ್ಯಾಪಕ ಪುಟ್ಟಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement