ನಾಳೆ ಯುವ ದಲಿತ ಸಾಹಿತ್ಯ, ಸಾಂಸ್ಕೃತಿಕ ಉತ್ಸವ
ಮೈಸೂರು: ಕರ್ನಾಟಕ ಪ.ಜಾತಿ, ಪ.ಪಂಗಡ ಪದವೀಧರರ ಒಕ್ಕೂಟವು ಜೂ. 14ರ ಬೆಳಗ್ಗೆ 10ಕ್ಕೆ ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ್ ಪ್ಯಾರಡೈಸ್ನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ರಾಜ್ಯ ಮಟ್ಟದ ಯುವ ದಲಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಯೋಜಿಸಿದೆ. ಕೇಂದ್ರದ ಮಾಜಿ ಸಚಿವ ಹಾಗೂ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಮೋಟಮ್ಮ ಅಧ್ಯಕ್ಷತೆ ವಹಿಸುವರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಸಚಿವರಾದ ವಿ. ಶ್ರೀನಿವಾಸಪ್ರಸಾದ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಎಚ್. ಆಂಜನೇಯ, ದಿನೇಶ್ ಗುಂಡೂರಾವ್, ಉಮಾಶ್ರೀ, ಶಾಸಕರಾದ ಎಂ. ಕೃಷ್ಣಪ್ಪ, ಪ್ರಿಯಾಂಕ್ ಖರ್ಗೆ ಮುಖ್ಯ ಅತಿಥಿಯಾಗಿ ಆಗಮಿಸುವರು ಎಂದು ಒಕ್ಕೂಟದ ಗೌರವಾಧ್ಯಕ್ಷ ಡಾ. ಮುಳ್ಳೂರು ನಂಜುಂಡಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.