ಕೇಂದ್ರದ ಅನುಮತಿ ಬಳಿಕ ಕನ್ನಡ ಶಾಸ್ತ್ರೀಯ ಭಾಷಾ ಕಚೇರಿ ಸ್ಥಳಾಂತರ
ಮೈಸೂರು: ಕೇಂದ್ರ ಸರ್ಕಾರ ಅನುಮತಿ ನೀಡಿದ ಬಳಿಕ ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದರು. ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಮತ್ತು ಮಾಧ್ಯಮದವರ ಸಹಕಾರದಿಂದ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಇಲ್ಲಿ ಕೆಲಸ ಆಗಿಲ್ಲ. ಕನ್ನಡಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಧ್ಯಯನ ಮತ್ತು ಸಂಶೋಧನೆ ನಡೆಯಬೇಕಿದೆ. ಕೇಂದ್ರದಿಂದ ಬಂದಿದ್ದ ಸಾಕಷ್ಟು ಅನುದಾನ ಹಿಂದಕ್ಕೆ ಹೋಗಿದೆ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.