ಅಂಬೇಡ್ಕರ್‌ಗೆ ಅಪಮಾನ ಮಾಡಿದವರ ಬಂಧಿಸಿ
ಹುಣಸೂರು: ರಾಯಚೂರು ನಗರದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅಪಮಾನಗೊಳಿಸಿರುವ ಘಟನೆ ಖಂಡಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಸದಸ್ಯರು ಕಲ್ಪತರು ವೃತ್ತದಲ್ಲಿ ಪ್ರತಿಭಟಿಸಿದರು. ದಸಂಸ ಮುಖಂಡ ಪುಟ್ಟಸ್ವಾಮಿ ಮಾತನಾಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆಗೆ ಪದೇ ಪದೇ ಇಂತಹ ಅವಮಾನ ನಡೆಯುತ್ತಿರುವುದು ಖಂಡನೀಯ. ಪೊಲೀಸರು ಕೂಡಲೇ ಇಂತಹ ಸಮಾಜ ದ್ರೋಹಿಗಳನ್ನು ಪತ್ತೆಹಚ್ಚಿ ಬಂಧಿಸಬೇಕು. ಇಂತಹ ಪ್ರಕರಣದಲ್ಲಿ ರಾಜಕಾರಣಿಗಳು ರಾಜಕೀಯ ಮಾಡುವುದನ್ನು ಬಿಟ್ಟು ನೊಂದ ಸಮುದಾಯಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.ಮುಖಂಡರಾದ ರಾಮಕೃಷ್ಣ ಅತ್ತಿಗುಪ್ಪೆ, ಮೂರ್ತಿ, ಜಯಶೀಲ, ಡೇವಿಡ್, ರಾಜು ಕಟ್ಟೆಮಳಲವಾಡಿ ಇದ್ದರು.