ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಪ್ಪಸೋಗೆ ಶಾಲಾ ಕಾಮಗಾರಿ ಕಳಪೆ: ತಾಪಂ ಸಭೆಯಲ್ಲಿ ಕಿಡಿ

Rashmi Kasaragodu
Updated On : 15 Jun 2014, 1:04 am

ನಂಜನಗೂಡು: ನಾಗಾರ್ಜುನ ಕಂಪನಿಯವರು ಕಪ್ಪಸೋಗೆ ಗ್ರಾಮದಲ್ಲಿ ನಿರ್ಮಿಸುತ್ತಿರುವ ಶಾಲಾ ಕಟ್ಟಡ ಕಾಮಗಾರಿಯು ಕಳಪೆಯಾಗಿದೆ ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಆರೋಪಿಸಿದರು. ಗುರುವಾರ ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ಪ್ರೌಢಶಾಲೆಯ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 48 ಲಕ್ಷ ಬಿಡುಗಡೆಯಾಗಿದೆ. ಕಟ್ಟಡವನ್ನು ಕಳಪೆ ಮರಳು ಮತ್ತು ಪರಿಕರಗಳನ್ನು ಉಪಯೋಗಿಸಿ ನಿರ್ಮಿಸುತ್ತಿರುವುದನ್ನು ತಿಳಿದು ಗ್ರಾಮಸ್ಥರು ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದ ಶಾಲಾ ಮಕ್ಕಳಿಗೆ ತೊಂದರೆಯಾಗಲಿದ್ದು, ತಕ್ಷಣವೇ ಗುಣಮಟ್ಟದ ಪರಿಶೀಲನಾ ತಂಡದಿಂದ ಪರಿಶೀಲಿಸಿ ವರದಿ ಆಧಾರದ ಮೇಲೆ ಕಾಮಗಾರಿ ನಡೆಸುವಂತೆ ಒತ್ತಾಯಿಸಿದರು. ಜೂ.15 ರಿಂದ ಜು.17 ರವರೆಗೆ ತಾಲೂಕಿನಾದ್ಯಂತ ಗ್ರಾಮ ಸಭೆಗಳನ್ನು ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕೆಂದು ಸಭೆಯಲ್ಲಿ ಡಾ.ಕೃಷ್ಣಂರಾಜು ಸಂಬಂಧಪಟ್ಟವರಿಗೆ ಸೂಚಿಸಿದರು. ತಾಪಂ ಅಧ್ಯಕ್ಷ ಎಸ್.ಎಂ.ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement