ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಮನವಿ
ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲೂಕಿನಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ ಮಾಡುವ ಮೂಲಕ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಬಿಜೆಪಿ ಮುಖಂಡ ಎಚ್.ಡಿ.ಗಣೇಶ್ ಕೇಂದ್ರ ರೇಲ್ವೆ ಸಚಿವ ಸದಾನಂದಗೌಡ ಅವರಲ್ಲಿ ಮನವಿ ಮಾಡಿದರು. ಬೆಂಗಳೂರಿನ ಸದಾನಂದಗೌಡರ ನಿವಾಸಕ್ಕೆ ಪಕ್ಷದ ವಿವಿಧ ಪದಾಧಿಕಾರಿಗಳೊಂದಿಗೆ ಭೇಟಿ ನೀಡಿ ಸಚಿವರನ್ನು ಅಭಿನಂದಿಸಿದ ವೇಳೆ ಅವರು ಈ ಮನವಿ ಸಲ್ಲಿಸಿದರು. ಮೈಸೂರಿನಿಂದ ಬಿಳಿಕೆರೆ, ಹುಣಸೂರು, ಪಿರಿಯಾಪಟ್ಟಣ ಮಾರ್ಗವಾಗಿ ಕುಶಾಲನಗರಕ್ಕೆ ರೇಲ್ವೆ ಸಂಪರ್ಕ ಕಲ್ಪಿಸುವುದರೊಂದಿಗೆ ತಾಲೂಕಿನಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಿದಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಸಿಗಲಿದೆ. ತಾಲೂಕಿನ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು. ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಹೇಮಂತ್ಕುಮಾರ್ಗೌಡ, ಎಚ್.ಡಿ.ಕೋಟೆ ತಾಲೂಕು ಅಧ್ಯಕ್ಷ ಹನಗೋಡು ಮಂಜಣ್ಣ, ಪ್ರಭಾಕರ್ ಜೈನ್ ಅನುರಾಜ್ ಪೂಣಚ್ಚ ಇದ್ದರು.