ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪೂರ್ಣಗೊಳ್ಳದ ಬಸ್ ನಿಲ್ದಾಣ ಕಾಮಗಾರಿ

Rashmi Kasaragodu
Updated On : 15 Jun 2014, 1:03 am

ಕೆ.ಆರ್. ನಗರ: ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅರ್ಧಕ್ಕೆ ನಿಂತಿರುವ ಬಸ್ ತಂಗುದಾಣ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡದಿರುವುದರಿಂದ ಸಾರ್ವಜನಿಕರ ಬಳಕೆಗೆ ಬರಬೇಕಾದ ತಂಗುದಾಣ ಪ್ರಯೋಜನಕ್ಕೆ ಬಾರದಂತಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ 12ನೇ ಹಣಕಾಸು ಯೋಜನೆಯಡಿ 75 ಸಾವಿರ ಅನುದಾನದಲ್ಲಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಕಾಮಗಾರಿ ಅನುದಾನದ ಕೊರತೆಯಿಂದ ಈವರೆಗೆ ಪೂರ್ಣಗೊಂಡಿಲ್ಲ. ನಾಲ್ಕು ವರ್ಷಗಳಿಂದ ಕಾಮಗಾರಿ ಪೂರ್ಣಗೊಳ್ಳದೆ ಪಾಳು ಬಿದ್ದಿರುವುದರಿಂದ ಕೆಲವರು ಚಿಲ್ಲರೆ ಅಂಗಡಿ, ಸೈಕಲ್‌ಶಾಪ್, ಪೆಟ್ರೋಲ್ ಮಾರಾಟ ಮಾಡಲು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ನಿಲ್ದಾಣ ನಿರ್ಮಾಣದ ಉದ್ದೇಶ ಈಡೇರದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement