ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಆಶ್ರಮ ಶಾಲೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

Mainashree
Updated On : 17 Jun 2014, 10:27 am

ಎಚ್.ಡಿ. ಕೋಟೆ: ಆಶ್ರಮ ಶಾಲೆಗಳ ಅವ್ಯವಸ್ಥೆ ಖಂಡಿಸಿ ಆದಿವಾಸಿಗಳು ಮತ್ತು ಪ್ರಗತಿಪರ ಸಂಘಟನೆಗಳು ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.
ವಡ್ಡರಗುಡಿ ಚಿಕ್ಕಣ್ಣ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಸುಮಾರು 120 ಆಶ್ರಮ ಶಾಲೆಗಳನ್ನು ತೆರೆದಿದ್ದು, ಒಂದು ಶಾಲೆಗೆ ತಿಂಗಳಿಗೆ 8.12 ಲಕ್ಷವನ್ನು ಪ.ವರ್ಗಗಳ ಇಲಾಖೆ ವ್ಯಯಿಸುತ್ತಿದೆ. ನಮ್ಮ ಆದಿವಾಸಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ವಿಫಲರಾಗಿದ್ದಾರೆ. ಆಶ್ರಮ ಶಾಲೆಗಳ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯಮಟ್ಟದಲ್ಲಿ ಪ.ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಟ್ಟದಲ್ಲಿ ಯೋಜನಾ ಸಮನ್ವಯಾಧಿಕಾರಿ, ತಾಲೂಕು ಮಟ್ಟದಲ್ಲಿ ಸಮಾಜ ಕಲ್ಯಾಣಾಧಿಕಾರಿಗಳ ನಿರ್ಲಕ್ಷದಿಂದ ಆದಿವಾಸಿ ಮಕ್ಕಳ ಶಿಕ್ಷಣದಲ್ಲಿ ಚೆಲ್ಲಾಟ ಆಡುತ್ತಿದ್ದಾರೆ. ಶಿಕ್ಷಣದ ಗುಣಮಟ್ಟ ವೃದ್ಧಿಸುವ ಸಲುವಾಗಿ ಶಿಕ್ಷಣ ಇಲಾಖೆಯಿಂದ ಶಿಕ್ಷಕರನ್ನು ನೇಮಿಸಬೇಕು. ತಪ್ಪಿದರೆ ಆಶ್ರಮ ಶಾಲೆಗಳು ನಮಗೆ ಅಗತ್ಯ. ಡಿ.ಬಿ. ಕುಪ್ಪೆ ಗಿರಿಜನ ಆಶ್ರಮ ಶಾಲೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement