ಒಂದೇ ಸೂರಿನಡಿ ರೇಷ್ಮೆ, ಕೃಷಿ, ತೋಟಗಾರಿಕೆ:
ಮೈಸೂರು: ರೇಷ್ಮೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಒಂದೆಡೆ ಕೆಲಸ ಮಾಡುವಂತೆ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕೃಷಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರೈತರಿಗೆ ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಒಂದೆಡೆ ಸಿಗುವಂತೆ ಮಾಡುವ ಉದ್ದೇಶದಿಂದ ಒಂದೇ ಸೂರಿನಡಿ ಮೂರು ಇಲಾಖೆಯನ್ನು ಸೇರಿಸುವ ಕಾರ್ಯ ನಡೆಯುತ್ತಿದೆ ಎಂದರು.