ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕೈ ವಿರುದ್ಧ ಬಿಜೆಪಿ ಪ್ರತಿಭಟನೆ 24ಕ್ಕೆ

Mainashree
Updated On : 17 Jun 2014, 10:27 am

ಕೆ.ಆರ್. ನಗರ: ಬಡವರು ಮತ್ತು ಹಿಂದುಳಿದವರ ಹೆಸರೇಳಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ಅವರನ್ನೇ ಕಡೆಗಣಿಸುತ್ತಿದ್ದು, ಸರ್ಕಾರದ ಈ ವರ್ತನೆ ವಿರುದ್ಧ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಸಮಿತಿ ವತಿಯಿಂದ ಜೂ.24 ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೇಮಂತ್ಕುಮಾರ್ ಗೌಡ ಹೇಳಿದರು.
ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಬಡವರಿಗಾಗಿ 3.25 ಲಕ್ಷ ಬಸವ ವಸತಿ ಮತ್ತು ಇತರ ಯೋಜನೆಗಳ ಮನೆಗಳನ್ನು ಮಂಜೂರು ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅವುಗಳಿಗೆ ಸಮರ್ಪಕವಾಗಿ ಹಣ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಫಲಾನುಭವಿಗಳು ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಬಸವ ವಸತಿ ಯೋಜನೆಯ ಫಲಾನುಭವಿಗಳನ್ನು ಗುರುತಿಸಲು ಸರ್ಕಾರ ವಿಫಲವಾಗಿದ್ದು, ಸರ್ಕಾರದ ಸವಲತ್ತುಗಳನ್ನು ನೀಡಲು ತಾರತಮ್ಯ ಹಾಗೂ ಪಕ್ಷಭೇದ ಮಾಡುತ್ತಿದ್ದು, ಮೈಸೂರಿನಲ್ಲಿ ವಾಜಪೇಯಿ ವಸತಿ ಮತ್ತು ಅಂಬೇಡ್ಕರ್ ಯೋಜನೆಯ ಮನೆಗಳಿಗೆ ಹಣ ಬಿಡುಗಡೆ ಮಾಡದೆ ಕೇವಲ ಬಡವರ ಪರ ಎಂದು ಹೇಳುತ್ತಿದೆ ಎಂದು ಟೀಕಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಸೇರಿದಂತೆ ಇತರೆ ರಾಜ್ಯ ನಾಯಕರು, ಜಿಲ್ಲಾ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಸಮಿತಿಯ ಜಿಲ್ಲಾಧ್ಯಕ್ಷ ರಾಜೇಗೌಡ, ಉಪಾಧ್ಯಕ್ಷ ಕಾಳಿಂಗರಾಜು, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಪಕ್ಷದ ಪದಾಧಿಕಾರಿಗಳಾದ ಶಶಿಧರಮೂರ್ತಿ, ಬಾಲಮನೋಹರ, ಚಂದಗಾಲು ಪ್ರವೀಣ, ಉಮೇಶ್, ಮುಕ್ಕೋಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement