ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಮೊದಲು ಕಾಮಗಾರಿ ಪೂರ್ಣಗೊಳಿಸಿ: ಶಾಸಕ

Mainashree
Updated On : 23 Jun 2014, 10:47 am

ಹುಣಸೂರು: ತಾಲೂಕಿನ ಅಭಿವೃದ್ಧಿಗೆ ನೂರಾರು ಕೋಟಿ ರು.ಗಳ ಅನುದಾನ ಮಂಜೂರಾಗಿದ್ದು, ಕಾಮಗಾರಿ ನಿರ್ವಹಿಸುವ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ ಎಚ್.ಪಿ.ಮಂಜುನಾಥ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹನಗೋಡು ಹೋಬಳಿಯ ಬೀರನಹಳ್ಳಿ ಗ್ರಾಮದ ಪರಿಶಿಷ್ಟ ಜನಾಂಗದ ಕಾಲೋನಿಗೆ ಎಸ್ಇಪಿ ಯೋಜನೆಯಡಿ 15 ಲಕ್ಷ ವೆಚ್ಚದ ಚರಂಡಿ ಹಾಗೂ ಸಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಕಳೆದ ಒಂದು ವರ್ಷದಲ್ಲಿ ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ಸಾವಿರಾರು ಕೋಟಿ ಹಣ ಮಂಜೂರು ಮಾಡಿದೆ. ಈ ದಿನ ತಾಲೂಕಿನ ವಿವಿಧ ಗ್ರಾಮಗಳಲ್ಲಿ 2.40 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಬೇಕು ಎಂದರು.
ರಸ್ತೆ ಮತ್ತು ಚರಂಡಿ ನಿರ್ಮಿಸಿಲ್ಲ: ಕಳೆದ ಮೂರು ತಿಂಗಳ ಹಿಂದಷ್ಟೆ ಬೀರನಹಳ್ಳಿ ಗ್ರಾಮದ ಸಂಪರ್ಕ ರಸ್ತೆಗೆ 2.40 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ವೀರಶೈವರ ಬೀದಿಗೆ 5 ಲಕ್ಷ ವೆಚ್ಚದ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಇನ್ನೂ ಕಾಮಗಾರಿ ಪ್ರಾರಂಭಿಸಿಲ್ಲ. ಗುಂಡಿ ರಸ್ತೆ ಎಂದು ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ ಎಂದು ಶಾಸಕರಿಗೆ ಗ್ರಾಮಸ್ಥರು ದೂರಿದಾಗ, ಕಾಮಗಾರಿ ನಿರ್ವಹಿಸುತ್ತಿರುವ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಇನ್ನೊಂದು ವಾರದೊಳಗೆ ಕಾಮಗಾರಿ ಪ್ರಾರಂಭಿಸಬೇಕೆಂದು ಸೂಚಿಸಿದರು.
ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹೊನ್ನೇಗೌಡ, ಭೂ ಸೇನಾ ನಿಗಮದ ಎಇಇ ರವೀಂದ್ರ, ರಾಜ್ಯ ಗ್ರಾಪಂ ಪುನರ್ವಿಂಗಡಣ ಸಮಿತಿ ಸದಸ್ಯೆ ಸುಧಾಮಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಳಿಕೆರೆ ಬಸವರಾಜ್, ಗ್ರಾಪಂ ಸದಸ್ಯರಾದ ರಾಧಾ, ರಾಮಕೃಷ್ಣ, ಬಾಲಸುಂದರ್, ಮುಖಂಡರಾದ ಮಾದೇವಚಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement