ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಾಗುವಳಿದಾರರ ಒಕ್ಕಲೆಬ್ಬಿಸುವಿಕೆಗೆ ಖಂಡನೆ

Mainashree
Updated On : 26 Jun 2014, 10:28 am

ಮೈಸೂರು: ಯಾದಗಿರಿ ಜಿಲ್ಲೆ ಕಮಲಾನಗರ ಕ್ಯಾಂಪ್‌ನ ನಾಲ್ಕು ತಾಂಡಾಗಳಿಗೆ ಸೇರಿದ ಮತ್ತು ಶಿವಮೊಗ್ಗ ಜಿಲ್ಲೆಯ ಆನಂದಪುರಂ ಹತ್ತಿರದ ಕರಡಿಬೆಟ್ಟದ ವ್ಯಾಪ್ತಿಯಲ್ಲಿ 20 ವರ್ಷಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ರೈತರನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸಿರುವ ಘಟನೆಯನ್ನು ರೈತ- ಕೃಷಿ ಕಾರ್ಮಿಕ ಸಂಘಟನೆ ತೀವ್ರವಾಗಿ ಖಂಡಿಸಿದೆ. ಈಗಾಗಲೇ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರವು ಕಂದಾಯ, ಅರಣ್ಯ ಹಾಗೂ ಭೂಮಾಪನ ಇಲಾಖೆಗಳ ಉನ್ನತ ಅಧಿಕಾರಿಗಳ ಜಂಟಿ ಸಮಿತಿಯನ್ನು ರಾಜ್ಯ, ವಿಭಾಗೀಯ ಹಾಗೂ ಜಿಲ್ಲಾ ಮಟ್ಟದಲ್ಲೂ ರಚಿಸಿ ಈ ಎಲ್ಲಾ ಇಲಾಖೆಗಳು ಜಂಟಿಯಾಗಿ ರಾಜ್ಯಾದ್ಯಂತ ಅರಣ್ಯ ಮತ್ತು ಕಂದಾಯ ಭೂಮಿಯ ಸರ್ವೇ ಮಾಡಿ ತಿಂಗಳಿಗೊಮ್ಮೆ ಸಭೆ ನಡೆಸಿ 6 ತಿಂಗಳೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಆಜ್ಞಾಪಿಸಿದೆ. ಆದರೆ ಸಮಿತಿ ಸರ್ವೆ ನಡೆಸಿ ವರದಿ ಸಲ್ಲಿಸುವ ಮುನ್ನವೇ ಅರಣ್ಯ ಇಲಾಖೆಯವರು ದೌರ್ಜನ್ಯ ನಡೆಸಿದ್ದಾರೆ. ಇದೇ ವೇಳೆ ಇಲಾಖೆ ಸಿಬ್ಬಂದಿಯನ್ನು ಧೈರ್ಯವಾಗಿ ಹಿಮ್ಮೆಟ್ಟಿಸಿರುವ ರೈತರನ್ನು ಅಭಿನಂದಿಸುವುದಾಗಿ ಆರ್‌ಕೆಎಸ್ ಜಿಲ್ಲಾ ಸಮಿತಿ ಸಂಚಾಲಕ ಎಂ. ಶಶಿಧರ್ ಅಭಿನಂದಿಸಿದ್ದಾರೆ.
ವರ್ತಕರ ಮಹಾಸಭೆ ಇಂದು
ಎಚ್.ಡಿ. ಕೋಟೆ: ಪಟ್ಟಣದ ವರ್ತಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜೂ. 27ರ ಮಧ್ಯಾಹ್ನ 3ಕ್ಕೆ ಪಟ್ಟಣದ 2ನೇ ಮುಖ್ಯ ರಸ್ತೆಯ ಅಪ್ಪಾಜಿಗೌಡರ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಆದ್ದರಿಂದ ಪಟ್ಟಣದ ಎಲ್ಲಾ ವರ್ತಕರು, ನಿಗದಿತ ವೇಳೆಗೆ ಸಭೆಗೆ ಕಡ್‌ಡಾಯ ಹಾಜರಾಗುವಂತೆ ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement