ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಟ್ಟಡ ಕಾರ್ಮಿಕರಿಗೆ ಕಾನೂನು ಅರಿವು

Mainashree
Updated On : 30 Jun 2014, 11:01 am

ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ ಮತ್ತು ರಾಜ್ಯ ಭಾರತಮಾತ ಕಟ್ಟಡ ಕಾರ್ಮಿಕರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಕಟ್ಟಡ ನಿರ್ಮಾಣ ಕಾರ್ಮಿಕರಿಗಾಗಿ ಕಾನೂನು ಮಾಹಿತಿ ಶಿಬಿರ ಏರ್ಪಡಿಸಲಾಗಿತ್ತು.
ಆರ್.ಎಸ್. ನಾಯ್ಡು ನಗರದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಕೆ.ಎಸ್. ಮುದಗಲ್ ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಇಲಾಖಾ ಅಧಿಕಾರಿಗಳು ಸಮರ್ಪಕವಾಗಿ ತಲುಪಿಸಬೇಕು. ಕಟ್ಟಡ ಕಾರ್ಮಿಕರನ್ನು ಗುರುತಿಸಿ ಅವರಿಗೆ ಕಾನೂನಿನ ಬಗ್ಗೆ ತಿಳಿವಳಿಕೆ ನೀಡಿ ಮುಖ್ಯವಾಹಿನಿಗೆ ತರಬೇಕೆಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ವೆಂಕಟೇಶ್ ಸಿ.ಸಿದ್ದಹಟ್ಟಿ ಮಾತನಾಡಿ, ಪ್ರತಿಯೊಬ್ಬ ಕಟ್ಟಡ ಕಾರ್ಮಿಕರು ಗುರುತಿನ ಚೀಟಿ ಪಡೆಯಬೇಕು. ಇಲಾಖಾ ಕಚೇರಿಗೆ ಆಗಮಿಸಿ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೆರಾಲ್ಡ್ ಆರ್.ಮೆಂಡೋನ್ಜಾ ಮಾತನಾಡಿ, ಕಟ್ಟಡ ನಿರ್ಮಾಣದ ಕಾರ್ಮಿಕರಿಗೆ ಕಾನೂನಿನ ಅರಿವು ಅಗತ್ಯವಿದ್ದು, ಅಧಿಕಾರಿಗಳು ಕಾರ್ಮಿಕರ ಜತೆ ಸಮನ್ವಯತೆಯಿಂದ ನಡೆದುಕೊಳ್ಳಬೇಕು ಎಂದು ಸೂಚಿಸಿದರು.
ಕರ್ನಾಟಕ ರಾಜ್ಯ ಭಾರತಮಾತ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಸಿದ್ದರಾಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್ ಹೆಗ್ಡೆ, ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ಎಸ್. ಮೂರ್ತಿ, ಸಂಘದ ಕಾರ್ಯದರ್ಶಿ ಆರ್. ಸಿದ್ದಾರ್ಥ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement