ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸುದ್ದಿ ಸಂಕ್ಷೇಪ

Mainashree
Updated On : 2 Mar 2014, 10:53 am

ಪ್ರವಾಸ ಸಹಾಯಧನ ಬಿಡುಗಡೆ
ಮೈಸೂರು: ಕಳೆದ ನವೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ಪ್ರಿಂಟಿಂಗ್ ಯಂತ್ರೋಪಕರಣಗಳ ಅಂತಾರಾಷ್ಟ್ರೀಯ ಪ್ರದರ್ಶನದಲ್ಲಿ ಮೈಸೂರಿನಿಂದ ಪಾಲ್ಗೊಂಡಿದ್ದ ಪ್ರತಿನಿಧಿಗಳಿಗೆ ಪ್ರವಾಸ ಸಹಾಯಧನ ಬಿಡುಗಡೆಯಾಗಿದೆ. ಮೈಸೂರು ಪ್ರಿಂಟರ್ಸ್ ಕ್ಲಸ್ಟರ್‌ನ 20 ಉದ್ಯಮಿಗಳಿಗೆ 10 ಸಾವಿರ ಮಾರುಕಟ್ಟೆ ಅಭಿವೃದ್ಧಿ ಸಹಾಯಧವನ್ನು ರಾಜ್ಯ ಸರ್ಕಾರದ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ಬಿಡುಗಡೆ ಮಾಡಿದ್ದು, ಫಲಾನುಭವಿಗಳು ಮೈಸೂರು ಜಿಲ್ಲಾ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಘದ ಕಾರ್ಯಾಲಯದಲ್ಲಿ ಪಡೆದುಕೊಳ್ಳುವಂತೆ ಪ್ರಧಾನ ಕಾರ್ಯದರ್ಶಿ ಸುರೇಶ್‌ಕುಮಾರ್ ಜೈನ್ ತಿಳಿಸಿದ್ದಾರೆ.
ನಾಳೆ ತಾಪಂ ಪ್ರಗತಿ ಪರಿಶೀಲನಾ ಸಭೆ
ತಾಲೂಕು ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಮಾ. 4ರ ಬೆಳಗ್ಗೆ 11ಕ್ಕೆ ತಾಪಂ ಸಭಾಂಗಣದಲ್ಲಿ ನಡೆಯಲಿದ್ದು, ಅಧ್ಯಕ್ಷೆ ನಿರ್ಮಲಾ ಅಧ್ಯಕ್ಷತೆ ವಹಿಸುವರು.
ಬಿಡುಗಡೆ ಕಾರ್ಯಕ್ರಮ
ಬ್ಲಾಕ್ ಟಿಕೆಟ್ ಪ್ರೊಡಕ್ಷನ್ ನಿರ್ಮಿಸಿರುವ ಲೌಕಿಕ ಮೂವಿ ಟ್ರೇಲರ್ ಅಂತರ್ಜಾಲದಲ್ಲಿ ಬಿಡುಗಡೆ ಮಾಡುವ ಕಾರ್ಯಕ್ರಮವು ಮಾ. 4ರ ಬೆಳಗ್ಗೆ 10.30ಕ್ಕೆ ತ್ಯಾಗರಾಜ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ನಡೆಯಲಿದೆ. ಶಾಸಕ ಎಸ್. ಚಿಕ್ಕಮಾದು ಬಿಡುಗಡೆಗೊಳಿಸುವರು.
ಶಿಕ್ಷಕರ ಹುದ್ದೆಗೆ ತರಬೇತಿ
ಕುವೆಂಪುನಗರದಲ್ಲಿರುವ ಸ್ಪರ್ಧಾ ಅಕಾಡೆಮಿಯಲ್ಲಿ ಶಿಕ್ಷಕರ ಹುದ್ದೆಗಳಿಗೆ ತರಬೇತಿ ನೀಡಲಿದ್ದು, ಆಸಕ್ತರು ಮಾ. 4ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮೊ. 74060 74639 ಸಂಪರ್ಕಿಸಬಹುದು.
ಅಂಚೆ ಕಚೇರಿ ಸ್ಥಳಾಂತರ
ಜೆ.ಪಿ. ನಗರ ಅಂಚೆ ಕಚೇರಿಯು ಅದೇ ಪ್ರದೇಶದ ಪೆನೆಷಿಯಾ ಆಸ್ಪತ್ರೆಯ ಎದುರಿರುವ ಪಾಲಿಕೆ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಇನ್ನು ಮುಂದೆ ಸದರಿ ವಿಳಾಸದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಮೈಸೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ
ಸಿಇಟಿ ತರಬೇತಿ
ಚಾಮರಾಜ ಮೊಹಲ್ಲಾದಲ್ಲಿರುವ ನವೋದಯ ಫೌಂಡೇಷನ್‌ನಲ್ಲಿ ಸಬ್ ಇನ್‌ಸ್ಪೆಕ್ಟರ್, ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ತರಬೇತಿ ನೀಡಲಿದ್ದು, ಆಸಕ್ತರ ಮಾ.4ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮೊ. 96860 72224 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement