ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪೇದೆ ಹುದ್ದೆಗಳಿಗೆ ಅರ್ಜಿ ಆಹ್ವಾನ

Srinivasa Murthy VN
Updated On : 5 Mar 2014, 12:25 pm

ಮೈಸೂರು: ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಖಾಲಿ ಇರುವ 116 ಪೇದೆಗಳು ಹಾಗೂ 29 ಮಹಿಳಾ ಪೇದೆಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ (ವೆಬ್‌ಸೈಟ್ ಢಿಢಿಢಿ. ್ಞಡಠ.್ಜ್ಟಢ.್ಝಟಿ) ಮಾತ್ರ ಅರ್ಜಿ ಸಲ್ಲಿಸಬೇಕು. ಮಾ.27 ಅರ್ಜಿ ಸಲ್ಲಿಸಲು ಕಡೆ ದಿನ. ಬ್ಯಾಂಕಿನ ಮೂಲಕ ಶುಲ್ಕ ಪಾವತಿಸಲು ಮಾ.28 ಕಡೆ ದಿನ.
ಅರ್ಜಿ ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 19 ವರ್ಷ ಆಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷ ಹಾಗೂ ಇತರೆ ಅಭ್ಯರ್ಥಿಗಳಿಗೆ 25 ವರ್ಷದ ಒಳಗಿರಬೇಕು. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಮಾಜಿ ಸೈನಿಕ ಅಭ್ಯರ್ಥಿಯು ಸೈನ್ಯ ವಿಯೋಜನೆ, ಸೇವೆಯಿಂದ ತೆಗೆದು ಹಾಕಿದ, ಸೇವಾ ನಿವೃತ್ತಿ ಹೊಂದಿದ ಕಾರಣದಿಂದ ಬಿಡುಗಡೆಯಾದ ಮಾಜಿ ಯೋಧರಾಗಿದ್ದಲ್ಲಿ ಅವರಿಗೆ ಸೇವೆ ಸಲ್ಲಿಸಿದ ಸೇವಾವಧಿಯ ಜೊತೆಗೆ ಹೆಚ್ಚುವರಿ 3 ವರ್ಷಗಳ ರಿಯಾಯಿತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಈ ಹಿಂದೆ ಮೀಸಲಾತಿ ಸೌಲಭ್ಯ ಪಡೆದು ಸರ್ಕಾರಿ ಹುದ್ದೆಗೆ ಸೇರಿದವರು ಈ ನಿಯಮಗಳಡಿ ಪುನಾ ಮೀಸಲಾತಿಗೆ ಅರ್ಹರಾಗುವುದಿಲ್ಲ. ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ ಸೇರಿದವರಿಗೆ 100, ಇತರರಿಗೆ 250 ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಗದು ರೂಪದಲ್ಲಿ ಪರೀಕ್ಷಾ ಶುಲ್ಕವನ್ನು ಅಧಿಕೃತ ಎಸ್ ಬಿಎಂ ಶಾಖೆಗಳಲ್ಲಿ ಅಥವಾ ಎಸ್‌ಬಿಎಂ ಶಾಖೆ ಇಲ್ಲದ ಪ್ರದೇಶದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್‌ನಲ್ಲಿ ಪಾವತಿಸಬಹುದು. ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಸಲು ಢಿಢಿಢಿ.್ಞಡಠ. ್ಜ್ಟಢ.್ಝಟಿ ವೆಬ್‌ಸೈಟ್ ವೀಕ್ಷಿಸಬಹುದು ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement