ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಂಗನವಾಡಿಗಿಲ್ಲ ಉದ್ಘಾಟನಾ ಭಾಗ್ಯ

Srinivasa Murthy VN
Updated On : 10 Mar 2014, 1:25 am

ಕೆ.ಆರ್. ನಗರ: ಸರ್ಕಾರವು ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಕೋಟ್ಯಂತರ ರುಪಾಯಿ ವ್ಯಯ ಮಾಡುತ್ತಿದೆ. ಆದರೆ ಇದರ ಸಮರ್ಪಕ ಬಳಕೆಯ ವಿಚಾರದಲ್ಲಿ ಅಧಿಕಾರಿ ವರ್ಗದವರು ನಿರ್ಲಕ್ಷ್ಯ ವಹಿಸಿರುವುದರಿಂದ ನಿರ್ಮಾಣಗೊಂಡು ಒಂದು ವರ್ಷ ಕಳೆದರೂ ಅಂಗನವಾಡಿ ಕೇಂದ್ರದ ಕಟ್ಟಡ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಿದೆ.
ತಾಲೂಕಿನ ಮಾಯಿಗೌಡನಹಳ್ಳಿ ಗ್ರಾಪಂ ವ್ಯಾಪ್ತಿಗೆ ಸೇರಿದ ಗುಡುಗನಹಳ್ಳಿ ಗ್ರಾಮದಲ್ಲಿ ಜಿಪಂ ಅನುದಾನದಲ್ಲಿ 4 ಲಕ್ಷ ವೆಚ್ಚದಲ್ಲಿ ಕಳೆದ ವರ್ಷ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರ ಸಂಬಂಧಿಸಿದವರ ನಿರ್ಲಕ್ಷ್ಯದಿಂದ ಪಾಳು ಬಿದ್ದಿದ್ದು ಕಟ್ಟಡದ ಸುತ್ತ ಗಿಡಗಂಟೆಗಳು ಬೆಳೆದು ನಿಂತ್ತಿವೆ. ಹಾವು, ಚೇಳುಗಳ ಆವಾಸ ಸ್ಥಾನವಾಗಿದೆ.
ಗ್ರಾಮದ ಅಂಬೇಡ್ಕರ್ ಭವನದಲ್ಲಿ ಅಂಗನವಾಡಿ ಕೇಂದ್ರ ನಡೆಸಲಾಗುತ್ತಿತ್ತು. ನಂತರ ಸಮಸ್ಯೆ ಅರಿತು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಸಾ.ರಾ. ಮಹೇಶ್ ನಬಾರ್ಡ್ನಿಂದ ಅನುದಾನ ಮಂಜೂರು ಮಾಡಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಈಗ ಕಾಮಗಾರಿ ಪೂರ್ಣಗೊಂಡಿದ್ದರೂ ಸಂಬಂಧಿಸಿದವರು ಉದ್ಘಾಟಿಸಲು ಮುಂದಾಗಿಲ್ಲ.
ಕೇಂದ್ರವನ್ನು ಉದ್ಘಾಟಿಸಿ ಮಕ್ಕಳಿಗೆ ಅನುಕೂಲ ಕಲ್ಪಿಸಿಕೊಡದ ಬಗ್ಗೆ ಜಿಪಂ ಎಂಜಿನಿಯರುಗಳನ್ನು ಪ್ರಶ್ನಿಸಿದರೆ ಈ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಇದನ್ನು ತಮ್ಮ ವಶಕ್ಕೆ ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರೂ ಸಹ ಇದುವರೆಗೂ ಅದನ್ನು ಪಡೆಯಲು ಮುಂದಾಗಿಲ್ಲ. ಇದರಲ್ಲಿ ತಮ್ಮ ನಿರ್ಲಕ್ಷ್ಯ ಇಲ್ಲ ಎಂದು ಉತ್ತರಿಸುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement