ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ವೈದ್ಯ ಸೀಟು ಹಂಚಿಕೆಯಲ್ಲಿ ಅಕ್ರಮ

Srinivasa Murthy VN
Updated On : 10 Mar 2014, 11:26 am

ಮೈಸೂರು: ಭಾಷಾ ಅಲ್ಪಸಂಖ್ಯಾತರ ವೈದ್ಯಕೀಯ ಸೀಟು ಹಂಚಿಕೆಯಲ್ಲಿ ರಾಜ್ಯದ 7 ವೈದ್ಯಕೀಯ ಕಾಲೇಜುಗಳು ಅಕ್ರಮ ಎಸಗಿವೆ ಎಂದು ಸಮಾಜ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಅಯೂಬ್ ಖಾನ್ ಆರೋಪಿಸಿದರು. ರಾಜ್ಯದ 7 ವೈದ್ಯಕೀಯ ಕಾಲೇಜುಗಳಲ್ಲಿ ಈವರೆಗೂ 2732 ಭಾಷಾ ಅಲ್ಪಸಂಖ್ಯಾತರ ಸೀಟು ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಭಾಷಾ ಅಲ್ಪಸಂಖ್ಯಾತರ ಬದಲಾಗಿ ಇತರೆ ರಾಜ್ಯದವರು ಹಾಗೂ ವಿದೇಶಿ ವಿದ್ಯಾರ್ಥಿಗಳಿಗೆ ಸೀಟು ನೀಡಲಾಗಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಮಾಹಿತಿ ಹಕ್ಕು ಕಾಯ್ದೆಯಡಿ 7 ಕಾಲೇಜುಗಳ ಮಾಹಿತಿ ಪಡೆಯಲಾಗಿದೆ. ರಾಜ್ಯ ಸರ್ಕಾರ, ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ, ಭಾರತೀಯ ವೈದ್ಯಕೀಯ ಪರಿಷತ್ ಹಾಗೂ 7 ವೈದ್ಯಕೀಯ ಕಾಲೇಜುಗಳ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲು ನಿರ್ಧರಿಸಿರುವುದಾಗಿ ಅವರು ತಿಳಿಸಿದರು. ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡಿ ಶಿವರಾಜ್ ಇದ್ದರು.

ನಾಳೆ ವಿವಿಧೆಡೆ ಸ್ವರ್ಣ ಪ್ರಾಶನ
ಮೈಸೂರು: ನಗರದ ವಿವಿಧ ಸಂಘ ಸಂಸ್ಥೆಗಳಲ್ಲಿ ಮಾ.12 ರಂದು ಸ್ವರ್ಣ ಪ್ರಾಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಕೃಷ್ಣಮೂರ್ತಿಪುರಂನಲ್ಲಿರುವ ಎಸ್‌ಡಿಎಂ ಮಹಿಳಾ ಕಾಲೇಜಿನಲ್ಲಿ ಬೆಳಗ್ಗೆ 6.30ಕ್ಕೆ, ವಿಜಯನಗರದ ಓಂ ಆಯುರ್ವೇದ ಯೋಗ ಮತ್ತು ಸಂಶೋಧನಾ ಕೇಂದ್ರದಲ್ಲಿ ಬೆಳಗ್ಗೆ 8.30 ರಿಂದ ಸಂಜೆ 7.30, ಅಗ್ರಹಾರದಲ್ಲಿರುವ ಎಸ್.ಎನ್. ಪಂಡಿತ್ ಆ್ಯಂಡ್ ಸನ್ಸ್‌ನಲ್ಲಿ ಬೆಳಗ್ಗೆ 9.30 ರಿಂದ ರಾತ್ರಿ 8.30 ರವರೆಗೆ, ನಾರಾಯಣಶಾಸ್ತ್ರಿ ರಸ್ತೆಯ ಅನಾಥಾಲಯ ಬಳಿ ಇರುವ ದಿ ನಿಖಿಲಾ ಕರ್ನಾಟಕ ಸಂಸ್ಥೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ, ತ್ಯಾಗರಾಜ ರಸ್ತೆಯಲ್ಲಿರುವ ಸೌಖ್ಯ ಹೆಲ್ತ್‌ಕೇರ್ ಮತ್ತು ಪಂಚಕರ್ಮ ಕೇಂದ್ರದಲ್ಲಿ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ, ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗ್ಗೆ 8.30 ರಿಂದ ರಾತ್ರಿ 8.30 ರವರೆಗೆ, ಗೋಕುಲಂ 3ನೇ ಹಂತದಲ್ಲಿರುವ ಆಯುರ್ವೇದಾಂತ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement