ನಾಳೆ ಕಾಂಗ್ರೆಸ್ ಪಾದಯಾತ್ರೆ
ಟಿ. ನರಸೀಪುರ: ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಲ್ಲಿ ಮಾ. 15ರ ಬೆಳಗ್ಗೆ 9ಕ್ಕೆ ಕೇಂದ್ರ ಯುಪಿಎ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಲು ಭಾರತ್ ನಿರ್ಮಾಣ್ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್ ಹೇಳಿದರು.
ಪಟ್ಟಣದ ಮರಿಗೌಡ ಸ್ಮಾರಕ ಭವನದಲ್ಲಿ ಗುರುವಾರ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆ ನಡೆಸಿ ಪೂರ್ವ ಸಿದ್ಧತೆಗಳ ಬಗ್ಗೆ ಚಚೆ ನಡೆಸಲಾಯಿತು. ಪಾದಯಾತ್ರೆಯಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಆರ್. ಧ್ರುವನಾರಾಯಣ, ಕಾಂಗ್ರೆಸ್ ಮುಖಂಡ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನಾ ಭಾಗವಹಿಸುವರು.
ವಿದ್ಯೋ ದಯ ಕಾಲೇಜು ವೃತ್ತದಿಂದ ಆರಂಭವಾಗುವ ಪಾದಯಾತ್ರೆ ಕಾಲೇಜು ಹೊಸ ತಿರುಮಕೂಡಲು ಜೋಡಿ ರಸ್ತೆ, ಬೆನಕನಹಳ್ಳಿ ಗೇಟ್, ಸೋಸಲೆ ಹಾಗೂ ವ್ಯಾಸರಾಜಪುರ ಗ್ರಾಮಗಳ ಮಾರ್ಗವಾಗಿ ಸೋಮನಾಥಪುರ ಮತ್ತು ಬನ್ನೂರು ಟೌನ್ ವ್ಯಾಪ್ತಿಯಲ್ಲಿ ಅಂತ್ಯಗೊಳ್ಳಲಿದೆ. ನಂತರ ಅಲ್ಲಿಯೇ ಬಹಿರಂಗ ಸಭೆ ನಡೆಯಲಿದೆ.