ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಾಂಕ್ರಾಮಿಕ ರೋಗ ತಡೆಗಟ್ಟಲು ಸಲಹೆ

Srinivasa Murthy VN
Updated On : 14 Mar 2014, 12:46 pm

ಪಿರಿಯಾಪಟ್ಟಣ: ಕಲುಶಿತ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕರು ಮುನ್ನೆಚ್ಚರ ವಹಿಸುವಂತೆ ಕಂಪಲಾಪುರ ಗ್ರಾಮದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಎಸ್.ಕೆ. ರವಿಕುಮಾರ್ ಹೇಳಿದರು.
ಗ್ರಾಪಂ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಬಗ್ಗೆ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕಾಲರಾ, ಚಿಕನ್‌ಗುನ್ಯಾ, ಡೆಂಘೀ, ಮಲೇರಿಯಾ ಮುಂತಾದ ಕಾಯಿಲೆಗಳು ಹೆಚ್ಚಾಗಿ ನೀರಿನಿಂದ ಹರಡುವಂತ ಕಾಯಿಲೆಗಳಾಗಿದ್ದು, ಮನೆಯಲ್ಲಿ ಶೇಖರಿಸಿಡುವ ನೀರಿನ ಪಾತ್ರೆಗಳನ್ನು, ನೀರಿನ ತೊಟ್ಟಿಗಳನ್ನು ತೊಳೆದು ನೀರು ಶೇಖರಿಸಬೇಕು. ರಸ್ತೆ ಬದಿಯಲ್ಲಿ ಮಾರುವ ತೆರೆದಿಟ್ಟ ಮತ್ತು ಕತ್ತರಿಸಿದ ಹಣ್ಣುಗಳನ್ನು ತಿನ್ನಬಾರದು ಎಂದು ತಿಳಿಸಿದರು.
ಗ್ರಾಪಂ ಪಿಡಿಒ ಕುಮಾರ್, ಆರೋಗ್ಯ ಸಹಾಯಕ ಜಿ.ವಿ. ಶ್ರೀನಾಥ್ ಮಾತನಾಡಿದರು.  ಕಾರ್ಯಕ್ರಮಕ್ಕೂ ಮುನ್ನ ಶಾಲಾ ಮಕ್ಕಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಥಾ ನಡೆಯಿತು. ದೊಡ್ಡಬೇಲಾಳು ಗ್ರಾಪಂ ಪಿಡಿಒ ಮಲ್ಲೇಶ್, ಆರೋಗ್ಯ ಇಲಾಖೆಯ ಸಿಬ್ಬಂದಿ ಪಿ.ಸಿ. ಭವಾನಿ, ಗೀತಾ, ಬಿಲ್ ಕಲೆಕ್ಟರ್ ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement