ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕೇಂದ್ರದಲ್ಲಿ ಸರ್ಕಾರ ಬದಲಾದರೆ ಬೆಲೆ ಏರಿಕೆಗೆ ಕಡಿವಾಣ: ಮಹೇಂದ್ರ

Mainashree
Updated On : 17 Mar 2014, 10:18 am

ಟಿ. ನರಸೀಪುರ: ಕೇಂದ್ರದಲ್ಲಿ ಸರ್ಕಾರ ಬದಲಾದರೆ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂದು ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್.ಡಿ.ಮಹೇಂದ್ರ ಹೇಳಿದರು.
ತಾಲೂಕಿನ ಗರ್ಗೇಶ್ವರಿಯಲ್ಲಿ ಮನೆ ಮನೆ ಬಿಜೆಪಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕರಪತ್ರಗಳನ್ನು ವಿತರಿಸಿ ಮಾತನಾಡಿ, ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ನ ಬೆಲೆ ಏರಿಕೆ ನೀತಿಯು ಸಾಮಾನ್ಯ ಜನ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವೂ 9 ತಿಂಗಳಲ್ಲಿ ಶಾಶ್ವತ ಯೋಜನೆ ರೂಪಿಸಿಲ್ಲ. ಆದ್ದರಿಂದ ಲೋಕಸಭೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಜನತೆ ಬಿಜೆಪಿ ಬೆಂಬಲಿಸಿ, ಬದಲಾವಣೆ ತರಬೇಕು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಉತ್ತಮ ಆಡಳಿತ ನೀಡುವುದಾಗಿ ತಿಳಿಸಿದರು.
ವರುಣ ಬಿಜೆಪಿ ಕ್ಷೇತ್ರಾಧ್ಯಕ್ಷ ಶಿವನಂಜಪ್ಪ ಮಾತನಾಡಿದರು. ಹಿರಿಯ ಮುಖಂಡ ಮಹದೇವಯ್ಯ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ, ಮಂಜು, ಶಕ್ತಿ ಕೇಂದ್ರ ಅಧ್ಯಕ್ಷೆ ಶಾಂತಮ್ಮ, ಎಸ್ಟಿ ಮೋರ್ಚಾ ಕಾರ್ಯದರ್ಶಿ ನಾರಾಯಣಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ ಮಹದೇವಸ್ವಾಮಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ನೂರುಲ್ಲಾ, ಮುಖಂಡರಾದ ಹನುಮಂತೇಗೌಡ, ಸ್ವಾಮಿ, ಕಾಂತ, ಸುಧಾಮಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement