ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಬಿಜೆಪಿ ಬೆಂಬಲಿಸಲು ಕಾಪುಸಿ ಮನವಿ

Mainashree
Updated On : 18 Mar 2014, 11:42 am

ಟಿ. ನರಸೀಪುರ: ಈ ಬಾರಿಯ ಲೋಕಸಭಾ ಚುನಾವಣೆ ಬಳಿಕ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಿಂದ ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಸಬಾರದು  ಎಂದು ಚಾಮರಾಜನಗರ ಲೋಕಸಭಾ ಚುನಾವಣೆ ಉಸ್ತುವಾರಿ ಸಮಿತಿ ಸದಸ್ಯ, ಬಿಜೆಪಿ ಮುಖಂಡ ಕಾ.ಪು. ಸಿದ್ದಲಿಂಗಸ್ವಾಮಿ ಹೇಳಿದರು.
ತಾಲೂಕಿನ ಯಡದೊರೆ ಗ್ರಾಮದಲ್ಲಿ ಮಂಗಳವಾರ ಪಾದಯಾತ್ರೆ ನಡೆಸಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಪರ ಮತಯಾಚಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಮಾಡಬೇಕೆಂದು ರಾಷ್ಟ್ರದ ಜನತೆಯೇ ನಿರ್ಧರಿಸಿರುವುದರಿಂದ ವರುಣ ಕ್ಷೇತ್ರದ ಜನರು ಬಿಜೆಪಿ ಅಭ್ಯರ್ಥಿಯನ್ನೇ ಆಯ್ಕೆ ಮಾಡಬೇಕು ಎಂದರು.
ಬಿಜೆಪಿ ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಕೇಂದ್ರದಲ್ಲಿ ಈ ಹಿಂದಿನ ಎನ್‌ಡಿಎ ಸರ್ಕಾರ ಗ್ರಾಮ ಸಡಕ್ ಯೋಜನೆ ರೂಪಿಸಿ, ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಿ ನೇರವಾಗಿ ಅನುದಾನ ನೀಡಿತು. ವರುಣ ಕ್ಷೇತ್ರದ ಜನತೆ ಹಿಂದಿನ ಬಿಜೆಪಿ ಸರ್ಕಾರಗಳು ಮಾಡಿದಂತ ಅಭಿವೃದ್ಧಿ ಕಂಡು ತಮ್ಮನ್ನು ಈ ಬಾರಿಯಾದರೂ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.
ಜಿಪಂ ಮಾಜಿ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ, ಎಪಿಎಂಸಿ ಸದಸ್ಯ ದಯಾನಂದ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ. ನಂಜುಂಡಸ್ವಾಮಿ, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಡಿ. ಮಹೇಂದ್ರ, ವರುಣ ಬಿಜೆಪಿ ಕ್ಷೇತ್ರಾಧ್ಯಕ್ಷ ಶಿವನಂಜಪ್ಪ, ಪ್ರಧಾನ ಕಾರ್ಯದರ್ಶಿ ವೆಂಕಟರಮಣಶೆಟ್ಟಿ, ಮಂಜುನಾಥ, ಶಿವಬಸವಪ್ಪ, ಜಿಲ್ಲಾ ಕಾರ್ಯದರ್ಶಿ ವರಕೋಡು ಪ್ರಕಾಶ್, ಉಪಾಧ್ಯಕ್ಷ ಬಸವರಾಜು, ಮಂಜುನಾಥ, ಕರೋಹಟ್ಟಿ ಮಹದೇವಯ್ಯ, ಕುಪ್ಯ ಮಹದೇವಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement