ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಗ್ರಾಮೀಣರಲ್ಲಿ ಆರೋಗ್ಯ ಅರಿವು ಮೂಡಿಸಿ

Mainashree
Updated On : 20 Mar 2014, 12:09 pm

ಹುಣಸೂರು: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಮೂಲಕ ಗ್ರಾಮೀಣ ಜನರ ಆರೋಗ್ಯದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತೆ ಉಪವಿಭಾಗಾಧಿಕಾರಿ ಜಗದೀಶ್ ಕರೆ ನೀಡಿದರು.
ತಾಲೂಕಿನ ಹನಗೋಡು ಹೋಬಳಿಯ ಭರತವಾಡಿ ಗ್ರಾಮದಲ್ಲಿ ಮೈಸೂರಿನ ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೈಸೂರು ಮಹಾರಾಜ ಕಾಲೇಜಿನ ಪ್ರೊ.ಗುರುಪಾದಸ್ವಾಮಿ ಮಾತನಾಡಿ, ವೈದ್ಯರಾಗುವವರಿಗೆ ಸಮಾಜ ಹಾಗೂ ಸಮುದಾಯದ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಶಿಬಿರವನ್ನು ಗ್ರಾಮೀಣ ಭಾಗದಲ್ಲಿ ಹಾಗೂ ಗಿರಿಜನರ ಆರೋಗ್ಯ ಬದುಕು ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷ ದಾ.ರಾ. ಮಹೇಶ್, ಯೋಜನೆಯ ಸಲಹೆಗಾರ ಡಾ.ಪ್ರಶಾಂತ್, ವಿಶ್ವನಾಥ್, ಯೋಜನೆ ಸಂಯೋಜನಾಧಿಕಾರಿ ಡಾ. ಸುನಿಲ್‌ಕುಮಾರ್, ಡಾ.ಹೂಗಾರ ಸಿದ್ದಲಿಂಗಪ್ಪ, ಗ್ರಾಮದ ಮುಖಂಡರಾದ ಷಾಹತಾಜ್, ವೆಂಕಟೇಶ್, ಬಿಡ್ಡಯ್ಯ ಸೇರಿದಂತೆ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement