ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

'ನಿರಂತರ ಅಧ್ಯಯನ ರೂಢಿಸಿಕೊಳ್ಳಿ'

Mainashree
Updated On : 20 Mar 2014, 10:28 am

ಟಿ. ನರಸೀಪುರ: ಕಾಲೇಜು ವಿದ್ಯಾರ್ಥಿಗಳು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಂಡು ಬೌದ್ಧಿಕ ಮಟ್ಟವನ್ನು ವೃದ್ಧಿಸಿಕೊಳ್ಳಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಚನ್ನಬಸವೇಗೌಡ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲಕ ಕನ್ನಡ ವಿಭಾಗದ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಮೇಲಿನ ವ್ಯಾಮೋಹ ಬಿಟ್ಟು, ಬದುಕಿನಲ್ಲಿ ಆತ್ಮಸ್ಥೈರ್ಯ ಮೈಗೂಡಿಸಿಕೊಳ್ಳಬೇಕು. ಪುಸ್ತಕಗಳನ್ನು ಓದುವ ಮೂಲಕ ಜ್ಞಾನದ ದೀವಿಗೆ ಹಚ್ಚಬೇಕೆಂದು ತಿಳಿಸಿದರು.
ಕನ್ನಡ ವಿಭಾಗವು ಚರ್ಚಾ ಸ್ಪರ್ಧೆಗೆಂದು ನಾಲ್ಕು ದಿನಗಳ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಿದೆ. ನಿರಂತರವಾಗಿ ನಡೆಯುವ ತರಗತಿಗಳ ಜೊತೆ ಇಂಥ ಕೋರ್ಸ್ಗಳಿಗೂ ಪ್ರವೇಶಾತಿ ಪಡೆದುಕೊಂಡು ಸ್ಪರ್ಧಾತ್ಮಕ ಯುಗದಲ್ಲಿ ಸಮರ್ಥ ಪೈಪೋಟಿ ನೀಡಲು ವಿದ್ಯಾರ್ಥಿಗಳು ಅಣಿಯಾಗಬೇಕು ಎಂದು ಕಿವಿಮಾತು ಹೇಳಿದರು.  
ಕಾಲೇಜಿನ ಪ್ರಾಂಶುಪಾಲ ಪ್ರೊ.ನಟರಾಜು ಮಾತನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಎಚ್.ಎಂ. ಮಂಜುನಾಥ್ ಸರ್ಟಿಫಿಕೇಟ್ ಕೋರ್ಸ್ನ ಬಗ್ಗೆ ಮಾಹಿತಿ ನೀಡಿದರು. ದೈಹಿಕ ಶಿಕ್ಷಣ ನಿರ್ದೇಶಕ ಎಚ್.ವಿ. ಉದಯಕುಮಾರ್, ಸಹಾಯಕ ಪ್ರಾಧ್ಯಾಪಕರಾದ ಪೂರ್ಣಿಮ, ಎಸ್. ಹರೀಶ್, ಬಿ.ಪಿ. ಉಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement