ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದ ಶಿವಣ್ಣ
ನಂಜನಗೂಡು: ಚಾಮರಾಜನಗರ ಮೀಸಲು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸ್ವೀಕರಿಸುವ ಮುನ್ನ ಮಾಜಿ ಸಚಿವ ಎಂ.ಶಿವಣ್ಣ ಅವರು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಾಧನೆಯೇ ನನಗೆ ಶ್ರೀರಕ್ಷೆಯಾಗಿದೆ ಎಂದರು. ಶಾಸಕ ಎಸ್.ಚಿಕ್ಕಮಾದು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎನ್. ನರಸಿಂಹಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ, ಬಿ.ಪಿ. ಮುದ್ದುಮಲ್ಲು ಇದ್ದರು.